Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು: ಮಾಳ್ವಿಕಾ ಅವಿನಾಶ ಪ್ರಶ್ನೆ

ಬೆಳಗಾವಿ25: ಎನ್ ಡಿ ಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮೋದಿಯವರು, ಆದರೆ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಹೇಳಬೇಕು. ಪ್ರಧಾನಿ ಯಾರು ಆಗುತ್ತಾರೆ ಎಂಬ ಬಗ್ಗೆ ಅವರಲ್ಲೆ ಗೊಂದಲ ಇದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಮಾಳ್ವಿಕಾ ಅವಿನಾಶ ಅವರು ಹೇಳಿದ್ದಾರೆ.‌


ಇಂದು ನಗರದ ಬಿಜೆಪಿ ಮಾಧ್ಯಮ  ಕಾರ್ಯಾಲಯದಲ್ಲಿ ಮಾದ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ನಾಳೆ ದಕ್ಷಿಣ ಕರ್ನಾಟದ 14 ಕ್ಷೇತ್ರಕ್ಕೆ ಮತದಾನ ನಡೆಯಲಿದೆ ಅಲ್ಲಿನ ಜನ ಉತ್ತಮ ಬೆಂಬಲ ನೀಡುತ್ತಿದ್ದಾರೆ. ಎರಡನೆ ಚರಣದಲ್ಲಿ ಉತ್ತರ ಕರ್ನಾಟಕದ 14 ಸ್ಥಾನಕ್ಕೆ ಮಾರ್ಚ 7 ರಂದು ಮತದಾನ ನಡೆಯಲಿದೆ. ಇಲ್ಲಿಯೂ ಜನ ಉತ್ತಮ ಬೆಂಬಲ ಸೂಚಿಸುತ್ತಿದ್ದಾರೆ.‌ 2014 ರ ಮುಂಚೆ ಭಾರತದಲ್ಲಿ ಸಾಕಷ್ಟು ಭ್ರಷ್ಟಾಚಾರ ಇತ್ತು, ಆದರೆ 2014 ರ ನಂತರ ಮೋದಿ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ.‌ ಕಳೆದ 10 ವರವರ್ಷಗಳಲ್ಲಿ ಭಾರತದ ಆರ್ಥಿಕತೆ 5ನೇ ಸ್ಥಾನಕ್ಕೆ ಬಂದಿದೆ.  ಕೋವಿಡ್ ಇದ್ದರು ದೇಶ ಅಭಿವೃದ್ಧಿ ಸಾಧಿಸಿದೆ ಎಂದು ತಿಳಿಸಿದರು.


ಜೂನ್ 4 ರ ನಂತರ ಮೋದಿಯವರು ಪ್ರಧಾನಿಯಾದ ಬಳಿಕ ಕೆಲವೆ ವರ್ಷಗಳಲ್ಲಿ ಭಾರತವನ್ನು 3 ಅತೀ ದೊಡ್ಡ ಆರ್ಥಿಕ ದೇಶವನ್ನು ಮಾಡುವ ಗುರಿ ಹೊಂದಿದ್ದಾರೆ. ಹಾಗಾಗಿ ಜಗದೀಶಗ ಶೆಟ್ಟರ್ ಅವರನ್ನು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲಿಸಬೇಕು. ಮೋದಿಯವರ ಆಡಳಿತದಲ್ಲಿ ಬೆಳಗಾವಿಯಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ ಎಂದು ತಿಳಿಸಿದರು.‌


*ಮೋದಿ ಪ್ರವಾಸದಲ್ಲಿ ಬದಲಾವಣೆ: ಏ. 27ಕ್ಕೆ ಆಗಮಿಸಿ ಬೆಳಗಾವಿಯಲ್ಲಿ ವಾಸ್ತವ್ಯ*


ಬೆಳಗಾವಿಯಲ್ಲಿ ಮೋದಿಯವರು ಕೈಗೊಂಡಿದ್ದ ಬೆಳಗಾವಿ ಪ್ರವಾಸದ ಸಮಯದಲ್ಲಿ ಬದಲಾವಣೆ ಆಗಿದೆ. ಏ. 28 ರ ಬದಲಾಗಿ 27 ರಂದೆ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹುಡಲಿದ್ದಾರೆ ಎಂದು ಬೆಳಗಾವಿ ಬಿಜೆಪಿ ಗ್ರಾಮೀಣ ಜಿಲ್ಲಾದ್ಯಕ್ಷ ಸುಭಾಷ ಪಾಟೀಲ್ ಹೇಳಿದ್ದಾರೆ.


ಮೊದಿಯವ ಕಾರ್ಯಕ್ರಮದ ಸಮಯ ಬದಲಾಗಿದೆ. ಏ. 28 ರಂದು ಬೆಳಗ್ಗೆ 12 ಗಂಟೆಗೆ ವೇಧಿಕೆ ಕಾರ್ಯಕ್ರಮ ಆಗಲಿದೆ ಎಂದು ಹೇಳಲಾಗುತ್ತಿತ್ತು ಆದರೆ 28 ರಂದು 10 ಗಂಟೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.‌ ಮಹಾರಾಷ್ಟ್ರದಿಂದ ರಸ್ತೆ ಮೂಲಕ ಬೆಳಗಾವಿಗೆ ಏ 27 ರಂದು ಬಂದು ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ  ಮೋದಿಯವರು ವಾಸ್ತವ್ಯ ಹುಡಲಿದ್ದಾರೆ ಎಂದು ತಿಳಿಸಿದರು.‌


ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವಗೌಡ, ಮಾಜಿ ಸಿಎಂ ಕುಮಾರ ಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ವಿಜೇಂದ್ರ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದು ತಿಳಿಸಿದರು.


ಈ ವೇಳೆ ಬಿಜೆಪಿ ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸೂತಾರ, ಬಿಜೆಪಿ ಮುಖಂಡೆ ಭಾರತಿ ಮಗದುಮ, ರಾಜ್ಯ ಬಿಜೆಪಿ ಮಾಧ್ಯಮ‌ ಸಮಿತಿ ಸದಸ್ಯ ಎಫ್ ಎಸ್ ಸಿದ್ದನಗೌಡ, ಹನಮಂತ ಕೊಂಗಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ