Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣಗೆ ಪುರುಷತ್ವ ಪರೀಕ್ಷೆ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶುಕ್ರವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ವಿಶೇಷ ತನಿಖಾ ತಂಡ(ಎಸ್‌ಐಟಿ) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತು.

ಎಸ್‌ಐಟಿ ಸದ್ಯದಲ್ಲಿಯೇ ಪ್ರಜ್ವಲ್‌ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಅತ್ಯಾಚಾರ ಪ್ರಕರಣದ ಆರೋಪಿಯು ಸಂತ್ರಸ್ಥ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಸಾಮರ್ಥ್ಯ ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಮಾಡಲಾಗುತ್ತದೆ.

ಪ್ರಜ್ವಲ್ ರೇವಣ್ಣ ಮೂರು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿದ್ದು, ಅವರ ತಾಯಿ ಭವಾನಿ ರೇವಣ್ಣ ಅವರು ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ. ಈ ಪ್ರಕರಣದಲ್ಲಿ ಭವಾನಿ ಆರೋಪಿಯಲ್ಲದಿದ್ದರೂ, ಆಕೆಯ ಪಾತ್ರದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ಬಯಸಿದೆ ಎಂದು ವರದಿಯಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋಗಳು ಸೋರಿಕೆಯಾದ ನಂತರ ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಹಾಸನದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸುತ್ತಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಕಳೆದ ಏಪ್ರಿಲ್ 27 ರಂದು ವಿದೇಶಕ್ಕೆ ಹೋದವರು ಇಂದು ಬೆಳಗ್ಗೆಯಷ್ಟೇ ವಾಪಸ್ಸಾಗಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ