Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ಡಿ ಅತಂಕಗಳ ನಡುವೆ ಮತ್ತೆ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆಯಾಗಿ ಮತ್ತೆ ಮಂಜುಳ ನೇಮಕ







ಬಳ್ಳಾರಿ, ಮಾ.23: ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ  ಪಕ್ಷದಲ್ಲಿ ಶ್ರಮಿಸುತ್ತಾ ಬಂದಿರುವ ನೇಕಾರ ಸಮುದಾಯದ ಎಂ.ಎಸ್.ಮಂಜುಳ ಮತ್ತೆ ಬಳ್ಳಾರಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷೆ ಸೌಮ್ಯಾರೆಡ್ಡಿ ನೇಮಕ ಮಾಡಿದ್ದಾರೆ.

ತಮಗೆ ನೀಡಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕೆಪಿಸಿಸಿ, ಹಾಗೂ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರುವ ಹಾಗೂ ಮಹಿಳಾ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ಮೂಲಕ ಪಕ್ಷದ ಬಲವರ್ಧನೆಗಾಗಿ ಕಾರ್ಯೋನ್ಮುಖರಾಗಬೇಕೆಂದು ಸೌಮ್ಯರೆಡ್ಡಿ ಸೂಚಿಸಿದ್ದಾರೆ.

ಅಡ್ಡಿ ಆತಂಕ:

ಒಂದು ಬಾರಿ ಅಧ್ಯಕ್ಷೆಯಾಗಿದ್ದ ಮಂಜುಳ ಅವರನ್ನು ಈ ಬಾರಿ ಬದಲು ಮಾಡಿ, ಮಾಜಿ ಮೇಯರ್ ರಾಜೇಶ್ವರಿ, ಪಾಲಿಕೆ ಸದಸ್ಯೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಹೊನ್ನಪ್ಪ ಮತ್ತು ಈ ಹಿಂದೆ ಅಧ್ಯಕ್ಷೆಯಾಗಿದ್ದ ಪದ್ಮಾ ಇವರಲ್ಲಿ ಒಬ್ಬರನ್ನು ಮಾಡಲು ಪ್ರಭಾವಿ ಮುಖಂಡರೊಬ್ಬರು ಭಾರಿ ಪ್ರಯತ್ನ ಮಾಡಿದ್ದರು. ಅದರಲ್ಲೂ ಕವಿತಾ ಹೊನ್ನಪ್ಪ ಅವರ ಹೆಸರು ಮುಂ ಚೂಣಿಯಲ್ಲಿತ್ತು.

ಆದರೆ ತಾನು ಪಕ್ಷದ ಬೆಳವಣಿಗೆ ಮಾಡಿರುವ ಕೆಲಸವನ್ನು ತಿಳಿಸಿ. ಛಲಬಿಡದೆ ತನ್ನ ಸ್ಥಾನವನ್ನು ಮತ್ತೊಮ್ಮೆ ಭದ್ರಪಡೊಸಿಕೊಂಡಿದ್ದಾರೆ ಮಂಜುಳಾ ಅವರು.

ನನಗನ ಮೇಲೆ ಅನೇಕ ಪಿತೂರಿಗಳು ನಡೆದವು. ಕೆಲವರು ನನ್ನು ವಿರುದ್ದ ಮಾಡಿದ ತಂತ್ರ ಫಲಿಸಲಿಲ್ಲ. ಪಕ್ಷದ ನಾಯಕರಿಗೆ ನನ್ನ ಪಕ್ಷ ನಿಷ್ಟೆ ಗೊತ್ತಿದೆ. ಅದಕ್ಕಾಗಿ ಮುಂದುವರೆಸಿದ್ದಾರೆ. ಪಕ್ಷವೇ ನನ್ನ ಉಸಿರು. ನಮಗೂ ಸರ್ಕಾರದಲ್ಲಿ ನಾಮ ನಿರ್ದೇಶನದ ಹುದ್ದೆ ನೀಡಬೇಕಿದೆ ಎಂದು  ತಿಳಿಸಿದ್ದಾರೆ.

ಪಕ್ಷದ ಹಿರಿಯರಾದ ನಾಸೀರ್ ಹುಸೇನ್, ನಾಗೇಂದ್ರ, ಹುಮಾಯೂನ್ ಖಾನ್ ಮೊದಲಾದವರ ಸಹಕಾರವನ್ನು ಸ್ಮರಿಸಿದ್ದಾರೆ.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ