LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಶೂಟಿಂಗ್‌ನಲ್ಲಿ ಭಾರತಕ್ಕೆ ಎರಡು ಕಂಚು: ಪದಕ ಗೆದ್ದ ಮನು ಭಾಕರ್-ಸರಬ್ಜೋತ್‌ ಜೋಡಿ!

ಪ್ಯಾರಿಸ್‌: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಒಲಿದಿದೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ವಿಭಾಗದ ಸ್ಪರ್ಧೆಯಲ್ಲಿ

ಮನು ಭಾಕರ್ ಮತ್ತು ಸರಬ್ಜೋತ್‌ ಸಿಂಗ್‌ ಜೋಡಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮನು ಭಾಕರ್ ಎರಡು ದಿನಗಳ ಹಿಂದೆ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮೊದಲ ಕಂಚಿನ ಪದಕ ಭಾರತಕ್ಕೆ ತಂದುಕೊಟ್ಟಿದರು. ಮನು ಇದೀಗ ಎರಡನೇ ಪದಕ ಮುಡಿಗೇರಿಸಿಕೊಳ್ಳುವ ಮೂಲಕ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟುಯಾಗಿದ್ದಾರೆ.

ಮಂಗಳವಾರ ನಡೆದ ಕಂಚಿನ ಪದಕ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ  16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿತು.

ಸೋಮವಾರ ನಡೆದಿದ್ದ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್‌-ಸರಬ್ಜೋತ್‌ ಸಿಂಗ್‌ ಒಟ್ಟು 580 ಅಂಕ ಹಾಗೂ ಕೊರಿಯಾದ ಜೋಡಿ 579 ಅಂಕ ಗಳಿಸಿತ್ತು.

ಶೂಟಿಂಗ್ ವಿಭಾಗದಲ್ಲಿಯೇ ಭಾರತ ಪ್ಯಾರಿಸ್ ಒಲಿಂಪಿಕ್ಸನಲ್ಲಿ ಎರಡು ಪದಕ ತನ್ನದಗಿಸಿಕೊಂದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಶ್ರೀ ವರದ ಶಂಕರ ಪೂಜೆ ಮತ್ತು ಮಹಾಪ್ರಸಾದ**ರೈತರಿಂದ ಮತ್ತು ಬಿಜೆಪಿಯಿಂದ  ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ. ತನವ್ ಮೋಹನ್ ಗೆ ವರ್ಷದ ಕನ್ನಡಿಗ ಪ್ರಶಸ್ತಿರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪಿ.ಟಿ. ಪರಮೇಶ್ವರ ನಾಯ್ಕ ಪ್ರವಾಸಸಮಾಜ ಸಂಘಟನೆಯಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯ-ಪ್ರೊ ಮಿಥುನ ಅಂಕಲಿ ಅಭಿಮತಬಳ್ಳಾರಿ: ಕಂಪ್ಲಿ ಮತ್ತು ಕುಡುತಿನಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ - ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಮಾದಕ ವ್ಯಸನಮುಕ್ತ ಸಮಾಜದಿಂದ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ: ಡಾ. ವೀರೇಂದ್ರ ಕುಮಾರ್ ಕರೆಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲಬರ ಪೀಡಿತ ತಾಲೂಕು ಘೋಷಣೆ ಶೇ.೨೦೦ ಖಚಿತ-ಶಾಸಕ ನಾಡಗೌಡ