ಧಾರವಾಡ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಧರಣಿ ನಡೆಸಿದರು.
ಜಿಲ್ಲೆಯಲ್ಲಿರುವ ಶಿಕ್ಷಕಿಯರ ಗೌರವ ಧನ ಹೆಚ್ಚಳ, ಅಂಗನವಾಡಿ ಬಾಕಿ ಇರುವ ಬಾಡಿಗೆ ಹಣ ಬಿಡುಗಡೆ ಮಾಡುವುದು, ಅಂಗನವಾಡಿಗಳಲ್ಲಿ ಖಾಲಿ ಇರುವ ಶಿಕ್ಷಕಿ ಮತ್ತು ಸಹಾಯಕಿಯರನ್ನು ನೇಮಕಾತಿ ಮಾಡಿಕೊಳ್ಳುವುದು, ಅನಾರೋಗ್ಯದಿಂದ ಬಳಲುತ್ತಿರುವ ಅಂಗನವಾಡಿ ಶಿಕ್ಷಕಿಯರನ್ನು ಬಿಎಲ್‌ಓ ಕೆಲಸದಿಂದ ಕೈ ಬಿಡುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು, ಪ್ರತಿವರ್ಷ ಅಂಗನವಾಡಿ ಕೇಂದ್ರಗಳಿಗೆ 6-8 ಸಿಲಿಂಡರ್‌ಗಳನ್ನು ಪೂರೈಕೆ ಮಾಡಬೇಕು, ಶಿಕ್ಷಕಿಯರು ಮತ್ತು ಸಹಾಯಕಿಯರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು ಪ್ರಸ್ತುತ ನೀಡುತ್ತಿರುವ ಗೌರವ ಧನವನ್ನು ಪ್ರತಿ ತಿಂಗಳು 1ನೇ ತಾರೀಖಿಗೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
