ಹುನಗುಂದ: ಸ್ವಾಮಿನಾಥನ್ ವರದಿಯ ಶಿಫಾರಸಿನಂತೆ ರೈತರು ಬೆಳೆದ ಎಲ್ಲ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆಯು ಹುನಗುಂದ ಪಟ್ಟಣ ಹೊಂದಿದ ರಾಷ್ಟ್ರೀಯ ಹೆದ್ದಾರಿ-೫೦ರಲ್ಲಿ ವಾಹನ ಸಂಚಾರ ತಡೆದು ಬೃಹತ್ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ರೈತ ಮುಖಂಡ ಅಮರೇಶ ನಾಗೂರ ಮಾತನಾಡಿ ಕಬ್ಬು ಬೆಳೆ ಸೇರಿದಂತೆ ರೈತರು ಬೆಳೆದ ಬೆಳೆಗಳಿಗೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ನ್ಯಾಯಯುತ ಬೆಲೆ ದೊರೆಯಬೇಕು. ರೈತರು ಬೆಳೆದ ಉತ್ಪನ್ನಗಳನ್ನು ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಎಲ್ಲ ಬೆಳೆಗಳಿಗೂ ವ?ಪೂರ್ತಿ ಬೆಂಬಲ ಬೆಲೆ ಕೇಂದ್ರಗಳನ್ನು ತೆರೆಯಬೇಕು.
ತಾಲೂಕಿನ ವಿವಿಧ ಭಾಗಗಳಲ್ಲಿ ಹಳ್ಳ, ಹೊಳೆಗಳ ಹೂಳು ತೆಗೆದು ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸಬೇಕು. ಮಳೆನೀರು ವ್ಯರ್ಥವಾಗಿ ಹರಿದು ಹೋಗುವುದನ್ನು ತಡೆದು ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಅಮರೇಶ ನಾಗೂರ ಒತ್ತಾಯಿಸಿದರು. ಕರವೆ ತಾಲೂಕ ಅಧ್ಯಕ್ಷ ರೋಹಿತ್ ಬಾರಕೇರ ಮಾತನಾಡಿ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಿ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು. ರೈತರು ಎದುರಿಸುತ್ತಿರುವ ಆರ್ಥಿಕ ಸಂಕ?ಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಶಶಿಕುಮಾರ ಬಂಸರಗಲ್ ಮಾತನಾಡಿ ಕೃಷಿ ಉತ್ಪನ್ನಗಳ ಬೆಲೆ ಏರಿಳಿತದಿಂದ ರೈತರು ನ? ಅನುಭವಿಸುತ್ತಿದ್ದು, ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದಿರುವುದು ಕೃಷಿ ವಲಯದ ಪ್ರಮುಖ ಸಮಸ್ಯೆಯಾಗಿದೆ. ಸರ್ಕಾರ ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಕೃಷಿಕರ ಹಿತ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದರು. ಸಂಘದ ಕಾರ್‍ಯಾಧ್ಯಕ್ಷ ಗುರು ಗಾಣಿಗೇರ, ಕರವೆ ಅಧ್ಯಕ್ಷ ಶರಣು ಗಾಣಿಗೇರ, ಶರಣಬಸು ಚಿತಾಪೂರ, ಜಹೀರ ಸಂಗಮಕರ, ಸಂಗಪ್ಪ ರಾಂಪೂರ, ಅಶೋಕ ಪೂಜಾರ ಸೇರಿದಂತ ಅನೇಕರು ಪಾಲ್ಗೊಂಡಿದ್ದರು. ಪೊಲಿಸ್ ಉಪಾಧೀಕ್ಷಕ ಸಂತೋಷ ಬನ್ನಟ್ಟಿ, ಪಿಎಸ್‌ಐ ಸಿದ್ಧಾರೂಢ ಆಬಲಕಟ್ಟಿ, ಎಸ್.ಆರ್. ನಾಯಕ, ನಾಗರಾಜ ಗಡದ ಪೊಲಿಸ್ ಬಂದೋಬಸ್ತ ಕಲ್ಪಿಸಿದ್ದರು.