LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್​ ಪ್ರತಿಭಟನೆ


ಶಿಮ್ಲಾ: ಇಲ್ಲಿನ ಸಂಜೌಲಿ ಪ್ರದೇಶದಲ್ಲಿ ಅನ್ಯ ಕೋಮಿನವರು ಅಕ್ರಮವಾಗಿ ಪ್ರಾರ್ಥನಾ ಮಂದಿರ ನಿರ್ಮಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಂಜೌಲಿಯಲ್ಲಿ ಪೊಲೀಸರು ಇಂದು ಬಿಎನ್​ಎಸ್​ ಸೆಕ್ಷನ್​ 163 (ನಿಷೇಧಾಜ್ಞೆ) ಜಾರಿ ಮಾಡಿದ್ದಾರೆ. ಬೆಳಗ್ಗೆ 7ರಿಂದ ರಾತ್ರಿ 11.59ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಶಿಮ್ಲಾ ಜಿಲ್ಲಾಧಿಕಾರಿ ಅನೂಪ್​ ಕಶ್ಯಪ್​ ತಿಳಿಸಿದ್ದಾರೆ.


ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಜೌಲಿ ನಗರದಲ್ಲಿ ಯಾವುದೇ ಅನುಮತಿ ಇಲ್ಲದೇ ಘೋಷಣೆ, ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶವಿಲ್ಲ. ಶಸಾಸ್ತ್ರಗಳು ಹಾಗೂ ದಹನಶೀಲ ವಸ್ತುಗಳನ್ನು ಸಾಗಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ನಗರದ ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್​ ಹಾಕಲಾಗಿದ್ದು, ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.


ಅಕ್ರಮವಾಗಿ ನಿರ್ಮಿಸಿರುವ ಪ್ರಾರ್ಥನಾ ಮಂದಿರವನ್ನು ತೆರವುಗೊಳಿಸಬೇಕು. ರಾಜ್ಯಕ್ಕೆ ಆಗಮಿಸುವ ಹೊರಗಿನವರ ನೋಂದಣಿ ಮಾಡಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.




ಈ ಕುರಿತು ಮಾತನಾಡಿರುವ ಸಿಎಂ ಸುಖ್ವೀಂದರ್​ ಸಿಂಗ್​ ಸುಖು, "ಜನರಿಗೆ ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ಯಾವುದೇ ಸಮುದಾಯದಿಂದ ಯಾವುದೇ ಹಾನಿ ಆಗಬಾರದು. ಜನರು ಇದಕ್ಕೆ ಯಾವುದೇ ರಾಜಕೀಯ ಬಣ್ಣ ನೀಡದೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು" ಎಂದು ಮನವಿ ಮಾಡಿದ್ದಾರೆ. (ಐಎಎನ್​ಎಸ್​)

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್