Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲೆ- ಸಂಸ್ಕೃತಿ ಮುಂದಿನ ಪೀಳಿಗೆಗೆ ತಲುಪಲಿ: ಶಾಷು ಮೋದಿನ್




ಮನಸೂರೆಗೊಂಡ ಜಾನಪದ ಸಂಗೀತ ಗಾಯನ, ಶಾಸ್ತ್ರೀಯ ನೃತ್ಯ ಪ್ರದರ್ಶನ
ಬಳ್ಳಾರಿ,ಫೆ.09 -ನಮ್ಮ ನಾಡು-ನುಡಿಯ ಕಲೆ ಮತ್ತು ಸಂಸ್ಕೃತಿಯು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ನಿರಂತರವಾಗಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯದ ನಾಡೋಜ ಸುಭದ್ರಮ್ಮ ಮಾನ್ಸೂರ್ ಬಯಲು ರಂಗಮಂದಿರದಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕಲಿಕಾ ತರಬೇತಿ ಪಡೆದ ವಿದ್ಯಾರ್ಥಿನಿಯರಿಂದ ಶನಿವಾರ ಹಮ್ಮಿಕೊಂಡಿದ್ದ ಜಾನಪದ ಸಂಗೀತ ಗಾಯನ ಮತ್ತು ಶಾಸ್ತ್ರೀಯ ನೃತ್ಯ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಲೆಯು ಒಂದು ಕಲ್ಪನೆಯಿಂದ ಉಗಮವಾಗುವಂತಹದ್ದು. ಯಾವ ಕಲೆ ಯಾರಲ್ಲಿ ಅಡಗಿರುತ್ತದೆ ಎಂಬುದು ತಿಳಿಯುವುದಿಲ್ಲ. ಆಂತರಿಕ ಜ್ಞಾನದಿಂದ ಮಾತ್ರ ತನ್ನಲ್ಲಿರುವ ಕಲೆ ಹೊರಹಾಕಲು ಸಾಧ್ಯವಾಗಲಿದೆ ಎಂದರು.
ಕಲೆಯು ಎಲ್ಲರಿಗೂ ಒಲಿಯುವುದಿಲ್ಲ. ಕಲಾವಿದರು ಶಿಸ್ತಿನಿಂದ ಕೂಡಿರುತ್ತಾರೆ. ಕಲೆಗೆ ಬೆಲೆ ಕಟ್ಟಲೂ ಸಾಧ್ಯವಿಲ್ಲ. ಕಲೆಯನ್ನು ಅಂತರ್ಗತ ಮಾಡಿಕೊಂಡಾಗ ಮಾತ್ರ ತಮ್ಮಲ್ಲಿರುವ ಕಲೆಯನ್ನು ಪ್ರಸ್ತುತಪಡಿಸಲು ಸಾಧ್ಯವಾಗಲಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಶಿಸಿಹೋಗುತ್ತಿರುವ ಕಲೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ರಾಜ್ಯ ಸರ್ಕಾರ ಮಾಡುತ್ತಿದೆ. ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ 6 ತಿಂಗಳು ಕಾಲ ಪ್ರತಿದಿನ 3 ತಾಸಿನಂತೆ ಜಾನಪದ ಸಂಗೀತ ಗಾಯನ ಮತ್ತು ಶಾಸ್ತ್ರೀಯ ನೃತ್ಯ ಪ್ರದರ್ಶನ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ನಿಲಯಪಾಲಕರಾದ ಉಷಾರಾಣಿ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಕಲೆ- ಸಂಸ್ಕೃತಿ ನಶಿಸುತ್ತಿದೆ. ಅದನ್ನು ವಿದ್ಯಾರ್ಥಿಗಳಲ್ಲಿ ಕಲಿಕಾ ತರಬೇತಿಯ ಮೂಲಕ ಹೊರಹಾಕುವ ಪ್ರಯತ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಕಾರ್ಯವಾಗುತ್ತಿದೆ ಎಂದರು.


ಮನಸೂರೆಗೊಂಡ ಜಾನಪದ ಸಂಗೀತ ಗಾಯನ, ಶಾಸ್ತ್ರೀಯ ನೃತ್ಯ ಪ್ರದರ್ಶನ: ಕಲಿಕಾ ತರಬೇತಿ ಪಡೆದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕೀಯರ ವಸತಿ ನಿಲಯದ ವಿದ್ಯಾರ್ಥಿನಿಯರಿಂದ ಜಾನಪದ ಸಂಗೀತ ಗಾಯನ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರಿಂದ ಶಾಸ್ತ್ರೀಯ ನೃತ್ಯ ಪ್ರದರ್ಶನ ನೋಡುಗ ಜನರ ಮನಸೂರೆಗೊಂಡು ಚಪ್ಪಾಳೆ ಗಿಟ್ಟಿಸಿಕೊಂಡರು.
ಈ ಸಂದರ್ಭದಲ್ಲಿ ತರಬೇತಿ ಗುರುಗಳಾದ ಜಾನಪದ ಗಾಯಕ ಎಸ್.ಎಂ ಹುಲುಗಪ್ಪ, ನೃತ್ಯ ಕಲಾವಿದರಾದ ಡಿ.ಇಂದ್ರಾಣಿ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ