ಬಳ್ಳಾರಿ :15: ಅಖಂಡ ಬಳ್ಳಾರಿ ಜಿಲ್ಲೆಯ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಯನ್ನು ಮಹಾನಗರ ಪಾಲಿಕೆ ಮಹಾಪೌರರಾದ ಪಿ ಗಾದೆಪ್ಪ ಚಾಲನೆ ನೀಡಿದರು. ಈ ಮೆರವಣಿಗೆಯ ರಥದಲ್ಲಿ ಕನ್ನಡ ತಾಯಿ ಭುವನೇಶ್ವರಿ ಮತ್ತು ಸಮ್ಮೇಳನದ ಸರ್ವಾಧ್ಯಕ್ಷರಾದ ಸಿ ಜಿಂಪಣ್ಣ ಅವರನ್ನು ಆಸೀನಗೊಳಿಸಿ, ನಗರದ ಅದಿದೇವತೆಯ ಕನಕ ದುರ್ಗಮ್ಮ ದೇವಸ್ಥಾನದಿಂದ ಅಂಡರ್ ಬ್ರಿಡ್ಜ್ ಮತ್ತು ರಾಯಲ್ ಸರ್ಕಲ್ ಮೂಲಕ ಮೆರವಣಿಗೆಯು ರಗವಾ ಕಲಾಮಂದಿರ ವೇದಿಕೆ ಕಾರ್ಯಕ್ರಮವನ್ನು ತಲುಪಿತು.
ಈ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ಪ್ರಕಾರಗಳೊಂದಿಗೆ ನೂರಾರು ಜನ ವಿದ್ಯಾರ್ಥಿಗಳು ಹಲವಾರು ಜನ ಕನ್ನಡ ಅಭಿಮಾನಿಗಳು ಕನ್ನಡಪರ ಸಂಘಟನೆಗಳ ಮುಖಂಡರುಗಳು ಕನ್ನಡಪರ ಸಂಘಟನೆಯ ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನ ಈ ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರವಣಿಗೆಯನ್ನು ಅತ್ಯಂತ ಯಶಸ್ವಿಗೊಳಿಸಿದರು.
ಈ ಮೆರವಣಿಗೆ ಕಾರ್ಯಕ್ರಮದಲ್ಲಿ ಅಖಂಡ ಬಳ್ಳಾರಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ನಿಷ್ಠಿರುದ್ರಪ್ಪ, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಹಂದಿಹಾಳ ಶಿವಲಿಂಗಪ್ಪ ಸೇರಿದಂತೆ ಅಖಂಡ ಜಿಲ್ಲೆಯ ವಿವಿಧ ತಾಲೂಕ ಪರಿಷತ್ತಿನ ಘಟಕಗಳ ಅಧ್ಯಕ್ಷರುಗಳು ಪದಾಧಿಕಾರಿಗಳು ಭಾಗವಹಿಸಿದ್ದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕಂಬರ ಚೇಡು ಮಠದ ಕಲ್ಯಾಣ ಮಹಾಸ್ವಾಮಿಗಳು, ಕೊಟ್ಟೂರು ಸ್ವಾಮಿ ಮಠದ ಶ್ರೀಗಳು ಸೇರಿದಂತೆ ವಿವಿಧ ಧರ್ಮದ ಮುಖಂಡರುಗಳು ಸ್ವಾಮೀಜಿಗಳು ಸಮ್ಮೇಳನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.