LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನೆನಪುಗಳ ಮಾತು ಮಧುರ ರೆಡ್ ಅಂಡ್ ವೈಟ್  ಸೆವೆನ್ ರಾಜ್  ಹೊಸ ಸಿನಿಮಾ










    ಪತ್ರಕರ್ತ, ಕಾರ್ಯಕಾರಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನೃತ್ಯ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿರುವ  ಹಾಗೂ  ರೆಡ್ ಅಂಡ್ ವೈಟ್  ಸೆವೆನ್ ರಾಜ್ ನಟಿಸಿ, ನಿರ್ಮಿಸಿರುವ 'ನೆನಪುಗಳ ಮಾತು ಮಧುರ' ಚಿತ್ರದ ಟ್ರೇಲರ್  ಇತ್ತೀಚಿಗೆ ಬಿಡುಗಡೆಯಾಯಿತು.

     ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಟ್ರೇಲರ್ ಅನಾವರಣ ಮಾಡಿ ಶುಭ ಕೋರಿದರು. ನವಶಕ್ತಿ ನಾಗರಾಜ್, ಮಹೇಂದರ್, ಲೋಕೇಂದ್ರ, ಮುನಿಕೃಷ್ಣ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

     "ನನಗೂ ಚಿತ್ರರಂಗಕ್ಕೂ ಮೂವತ್ತೈದು ವರ್ಷಗಳ ನಂಟು.ರುದ್ರ ತಾಂಡವ,  ಮತ್ಸರ,  ಅನುಕೂಲಕೊಬ್ಬ ಗಂಡ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ. ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಕಲಾವಿದನಾಗಿ ಗುರುತಿಸಿಕೊಂಡಿದ್ದೇನೆ. ಈ ಹಿಂದೆ ಎರಡು ಚಿತ್ರಗಳನ್ನು ನಿರ್ಮಾಣ ಕೂಡ ಮಾಡಿದ್ದೇನೆ. 'ನೆನಪುಗಳ ಮಾತು ಮಧುರ' ನನ್ನ ನಿರ್ಮಾಣದ ಮೂರನೇ ಚಿತ್ರ. ಈ ಚಿತ್ರದಲ್ಲೂ ಅಭಿನಯಿಸಿದ್ದೇನೆ. ನನ್ನ ಹುಟ್ಟುಹಬ್ಬದ ದಿನ ಟ್ರೇಲರ್ ಬಿಡುಗಡೆಯಾಗಿದ್ದು ಖುಷಿಯಾಗಿದೆ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಈ ಚಿತ್ರದ ಬಿಡುಗಡೆ ನಂತರ ನನ್ನ ಜೀವನಚರಿತ್ರೆಯನ್ನೇ ಸಿನಿಮಾ ಮಾಡುತ್ತಿದ್ದೇನೆ. ಚಿತ್ರಕ್ಕೆ '7 ರಿಂದ 77'' ಎಂದು ಹೆಸರಿಟ್ಟಿದ್ದೇನೆ" ಎಂದರು ರೆಡ್ & ವೈಟ್ ಸೆವೆನ್ ರಾಜ್.

     "ನೆನಪುಗಳ ಮಾತು ಮಧುರ' ನಾಲ್ಕು ಕಥೆಗಳ ಸಂಗಮ. ಒಂದು ಕಥೆ ಇಪ್ಪತ್ತೈದು ನಿಮಿಷಗಳ ಅವಧಿ ಇರುತ್ತದೆ. ನಾಲ್ಕು ಕಥೆಗಳು ಬೇರೆಯದೆ ಆಯಾಮದಲ್ಲಿ ಸಾಗುತ್ತದೆ. ಸದ್ಯದಲ್ಲೇ ನಾವು ಎದುರುಸುತ್ತಿರುವ ಹಾಗೂ ಕಣ್ಣಮುಂದೆ ನೋಡುತ್ತಿರುವ ಕೆಲವು ವಿಷಯಗಳೇ ಈ ಚಿತ್ರದ ಕಥೆಗೆ ಸ್ಪೂರ್ತಿ. ಇದು ನನ್ನ ನಿರ್ದೇಶನದ ಮೂರನೇ ಚಿತ್ರ. ನನ್ನ ಚಿತ್ರದಲ್ಲಿ ನಟಿಸಲು ಬಂದಿದ್ದ ನಿರ್ಮಾಪಕ ಸೆವೆನ್ ರಾಜ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಲು ಹೇಳಿದರು. ಕಥೆ, ಚಿತ್ರಕಥೆ, ಸಂಭಾಷಣೆ, ನೃತ್ಯ ನಿರ್ದೇಶನದ ಜವಾಬ್ದಾರಿಯನ್ನೂ ನಿರ್ವಹಿಸಿರುವ ನಾನು ಪ್ರಮುಖಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ.‌ ಕಳೆದ ವರ್ಷ ನಿರ್ಮಾಪಕರ ಹುಟ್ಟುಹಬ್ಬದ ದಿನ ಈ ಚಿತ್ರ ಆರಂಭವಾಗಿತ್ತು. ‌ಈ ವರ್ಷ ಅವರ ಹುಟ್ಟುಹಬ್ಬದ ದಿನ ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಚಿತ್ರದ ತಮಿಳು ರೈಟ್ಸ್ ಕೂಡ ಮಾರಾಟವಾಗಿದೆ" ಎಂದು ನಿರ್ದೇಶಕ ಅಫ್ಜಲ್ ತಿಳಿಸಿದರು.

     ಹಾಡುಗಳ ಕುರಿತು ರಾಜು ಎಮ್ಮಿಗಾನೂರು ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ವಸಿಷ್ಠ ಬಂಟನೂರು, ರಣವೀರ್, ರಾಜ್ ಪ್ರಭು, ಅಂಜಲಿ, ರೇಖಾ ರಮೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.











Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ