Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಶಿಕ್ಷಕರ ಘಟಕದ ಜಿಲ್ಲಾಧ್ಯಕ್ಷರಾಗಿ ಎಂ.ಜಿ. ಅಖಿಲ್ ಅಹಮದ್ ನೇಮಕ 



ಬಳ್ಳಾರಿ, ನ.06.: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಎಂ.ಜಿ. ಅಖಿಲ್ ಅಹಮದ್ ಅವರನ್ನು ರಾಜ್ಯ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ಅವರು ನೇಮಕ ಮಾಡಿ ಅದೇಶಿ ಸಿದ್ದಾರೆ.


ಬೆಂಗಳೂರು ಕೆ ಪಿ ಸಿ ಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ  ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಂ ಪ್ರಶಾಂತ್, ಹಾಗೂ ಹಿರಿಯ ನಾಯಕರಾದ ಶ್ರೀನಿವಾಸ ರೆಡ್ಡಿ (ಹೊಸಪೇಟೆ) ಮತ್ತು ತಿಮ್ಮಯ್ಯ ಪುರ್ಲೆ,  ಸತೀಶ್ ಕಾಂಡ್ರಾ ಅವರ ಸಮ್ಮುಖದಲ್ಲಿ ಅಧಿಕೃತ ಆದೇಶ ಪತ್ರ ಅಖಿಲ್ ಅಹಮದ್ ಅವರಿಗೆ ನೀಡಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಎಂ.ಜಿ. ಅಖಿಲ್ ಅಹಮದ್ ಅವರು ಮಾತನಾಡಿ

“ಈ ಜವಾಬ್ದಾರಿ ನನಗೆ ನೀಡಿರುವ ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಿಕ್ಷಕರ ಘಟಕದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ಮತ್ತು ಜಿಲ್ಲಾ ಅಧ್ಯಕ್ಷ ಅಲ್ಲಂ ಪ್ರಶಾಂತ್ ಸೇರಿದಂತೆ ಬಳ್ಳಾರಿಯ ರಾಜ್ಯಸಭಾ ಸದಸ್ಯರಾದ ನಾಸಿರ್ ಹುಸೇನ್, ಲೋಕಸಭಾ ಸಾಧ್ಯಸ್ಯರಾದ  ಈ ತುಕಾರಾಂ ಮಾಜಿ ಸಚಿವ ಬಿ. ನಾಗೇಂದ್ರ, ನಗರ ಶಾಸಕರಾದ ನಾರಾ ಭರತ್ ರೆಡ್ಡಿ, ಹಾಗೂ ಹಿರಿಯ ಮುಖಂಡ ಮುಂಡರಗಿ ನಾಗರಾಜ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಪಕ್ಷದ ನಂಬಿಕೆಗೆ ತಕ್ಕಂತೆ ಬಳ್ಳಾರಿ ಜಿಲ್ಲೆಯ ಶಿಕ್ಷಕರ ಧ್ವನಿಯನ್ನು ಸರ್ಕಾರದ ಮಟ್ಟದಲ್ಲಿ ಪ್ರಬಲವಾಗಿ ಕೇಳಿಸಿಸುವೆ. ಪಕ್ಷದ ಆಶಯಗಳು ಮತ್ತು ನಾಯಕತ್ವದ ನಿರ್ದೇಶನದಂತೆ ನಿಷ್ಠೆಯಿಂದ ಕೆಲಸ ಮಾಡುವೆ,”ಶಿಕ್ಷಕರಿಗೆ ಏನಾದರು ನನ್ನ ಅವಶ್ಯಕತೆವಿದ್ದರೆ  ನನ್ನ ಮೊಬೈಲ್  ಸಂಖ್ಯೆಗೆ 97314 97869 ಕರೆ ಮಾಡಿ  ಎಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ ನಗರ ಮತ್ತು ತಾಲ್ಲೂಕು ಕಾಂಗ್ರೆಸ್ ಘಟಕದ ಮುಖಂಡರು, ಶಿಕ್ಷಕರ ಸಂಘದ ಕಾರ್ಯಕರ್ತರು ಹಾಗೂ ಅನೇಕ ಶಿಕ್ಷಕರು ಭಾಗವಹಿಸಿ ಅಖಿಲ್ ಅಹಮದ್ ಅವರಿಗೆ ಅಭಿನಂದನೆ ಸಲ್ಲಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ