Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಏಡ್ಸ್ ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು.

ಸೋಮವಾರ ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ರಾಜ್ಯದಲ್ಲಿ 13,183 ಪ್ರಕರಣಗಳು ವರದಿಯಾಗಿದ್ದು, ಈ ಸಾಲಿನಲ್ಲಿ ಅಕ್ಟೋಬರ್ ವರೆಗೆ 7,720 ಪ್ರಕರಣಗಳು ಪತ್ತೆಯಾಗಿವೆ.

ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು, ಈ ವರ್ಷ ಅಕ್ಟೋಬರ್ ವರೆಗೆ 247 ಸೋಂಕು ವರದಿಯಾಗಿವೆ. ಗರ್ಭಿಣಿಯರಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ.0.03ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸುವ ಗುರಿಯೊಂದಿಗೆ ನಾವೆಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದರು.

ಟ್ರಕ್ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಮಾದಕವಸ್ತುಗಳನ್ನು ಸ್ವೀಕರಿಸುವವರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುತ್ತದೆ. ಸುರಕ್ಷಿತ ಲೈಂಗಿಕ ಕ್ರಿಯೆಯೇ ಮಾರಣಾಂತಿಕ ಕಾಯಿಲೆಯಿಂದ ಪಾರಾಗಲು ದಾರಿ. ಲೈಂಗಿಕ ಕಾರ್ಯಕರ್ತೆಯರನ್ನು ಸಮಾಜದ ಮುಖ್ಯ ವಾಹಿನಿಯಿಂದ ಹೊರಗೆ ಇಟ್ಟಿರುವ ಕಾರಣ ಗಂಡಾಂತರಗಳು ಉಂಟಾಗುತ್ತಿವೆ. ಆದರೆ, ಅವರನ್ನು ಮಾನವೀಯತ ದೃಷ್ಟಿಯಿಂದ ನೋಡದಿದ್ದರೆ ಏಡ್ಸ್ ನಿಯಂತ್ರಣ ಅಸಾಧ್ಯ ಎಂದು ತಿಳಿಸಿದರು.

ರಾಜ್ಯದಲ್ಲಿ 433 ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. 2592 ಸೌಲಭ್ಯಾಧಾರಿತ ಸಮಗ್ರ ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. ಅಲ್ಲಿ ನೀಡುತ್ತಿರುವ ಚಿಕಿತ್ಸೆ, ಥೆರಪಿಗಳಿಂದಾಗಿ ಇಳಿಕೆಯಾಗಿದೆ. ಇಷ್ಟಕ್ಕೆ ಸುಮ್ಮನಾಗದೇ ಎಚ್‌ಐವಿ/ಏಡ್ಸ್‌ ಪತ್ತೆಯೇ ಇಲ್ಲ ಎಂದು ಆಗುವವರೆಗೆ ಕೆಲಸ ಮಾಡಬೇಕು ಎಂದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*