Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್


* *ನಾಳೆ ವಿಧಾನಸೌಧದಲ್ಲಿ ಅಂಗನವಾಡಿ ಸಂಘಟನೆಗಳೊಂದಿಗೆ ಸಭೆ*

 *ಬೆಂಗಳೂರು:* ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ‌‌. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಗೌರವಧನ ಹೆಚ್ಚಳ ಹಾಗೂ ನಿವೃತ್ತಿಯಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಚಿವರು ಮಾತನಾಡಿದರು.‌


ಮಹಿಳೆಯರ ಸಬಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ನಡುವೆಯೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಈ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸಲಾಗಿದೆ ಎಂದರು.


 *ನಾಳೆ ಸಂಘಟನೆಗಳೊಂದಿಗೆ ಸಭೆ*

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಎಲ್ಲಾ ಸಂಘಟನೆಗಳೊಂದಿಗೆ ವಿಧಾನಸೌಧದಲ್ಲಿ ಗುರುವಾರ ಸಭೆ ನಡೆಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.


ಈ ವೇಳೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ, ಜಯಮ್ಮ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ, ಸೋಮಶೇಖರ್ ಯಾದಗಿರಿ, ಉಮಾದೇವಿ ಸೇರಿದಂತೆ ನೂರಾರು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ