Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಭೆ




2011ರ ನಂತರ ನಿವೃತ್ತಿಯಾದ ಕಾರ್ಯಕರ್ತೆಯರಿಗೆ  ಗ್ರ್ಯಾಚ್ಯುಟಿ  ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.


ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು, ಅಂಗನವಾಡಿಯ ವಿವಿಧ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚರ್ಚೆ ನಡೆಸಿದರು.


ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ.  ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ‌ ಜೊತೆ ಚರ್ಚೆ ನಡೆಸಿ‌‌ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.


ಈಗಾಗಲೇ ಸರ್ಕಾರ 2023-24ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ನಿವೃತ್ತಿ ಬಳಿಕ ಗ್ರ್ಯಾಚ್ಯುಟಿಗೆ ಆಡಳಿತಾತ್ಮಕ ಅನುಮತಿ ನೀಡಲಾಗಿದೆ. ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಸಂಘಟನೆಗಳ ಬೇಡಿಕೆಯಂತೆ 2011ರಿಂದ ಗ್ರ್ಯಾಚ್ಯುಟಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.


ಸಭೆಯಲ್ಲಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ‌ಬಿ.ಎಚ್‌.ನಿಶ್ಚಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಅಂಗನವಾಡಿ ನೌಕರರ‌ ಸಂಘದ ರಾಜ್ಯಾಧ್ಯಕ್ಷರಾದ ವರಲಕ್ಷ್ಮೀ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ