Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರುಭವನಕ್ಕೆ 17 ಗುಂಟೆ ಜಾಗ ಮಂಜೂರು ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಸಚಿವರಿಗೆ ಧನ್ಯವಾದ ಸಲ್ಲಿಸಿದ ಶಿಕ್ಷಕರ ಸಂಘ


ಬೆಳಗಾವಿ: ಬೆಳಗಾವಿ ಜಿಲ್ಲಾ ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದ್ದ ಗುರುಭವನ ನಿರ್ಮಾಣಕ್ಕಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಮುತುವರ್ಜಿ ವಹಿಸಿದ ಫಲವಾಗಿ 17 ಗುಂಟೆ ಜಾಗ ಮಂಜೂರಾಗಿದ್ದು, ಮಂಗಳವಾರ ಆದೇಶ ಪತ್ರ ಹಸ್ತಾಂತರಿಸಲಾಯಿತು.


ಕುವೆಂಪು ನಗರದಲ್ಲಿರುವ ಸಚಿವರ ಗೃಹಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಗುರುಭವನ ನಿರ್ಮಾಣಕ್ಕಾಗಿ ಮಂಜೂರಾಗಿರುವ 17 ಗುಂಟೆ ಜಾಗದ ಆದೇಶ ಪತ್ರವನ್ನು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಶಿಕ್ಷಕ ಸಂಘದ ಪದಾಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಸ್ತಾಂತರಿಸಿದರು.


 ಈ ವೇಳೆ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಚನ್ನರಾಜ್‌ ಹಟ್ಟಿಹೊಳಿ, ಶಿಕ್ಷಕರ ಸಂಘದ ಬಹುದಿನಗಳ ಬೇಡಿಕೆಯನ್ನು ಸಚಿವರು ಈಡೇರಿಸಿದ್ದಾರೆ. ತಾವು ನೀಡಿದ ಭರವಸೆಯಂತೆ ಜಾಗವನ್ನು ಮಂಜೂರು ಮಾಡಿಸಿಕೊಟ್ಟಿದ್ದಾರೆ ಎಂದರು.


ಗುರುಭವನಕ್ಕೆ ಜಾಗ ಮಂಜೂರು ಮಾಡಿಸಿಕೊಡುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಗುರುಕಾಣಿಕೆ ಅರ್ಪಿಸಿದ್ದಾರೆ. ಇಡೀ ರಾಜ್ಯಕ್ಕೆ ಮಾದರಿಯಾಗಿರುವ ಕೆಲಸವನ್ನು ಸಚಿವರು ಮಾಡಿದ್ದಾರೆ. ಹಿಂಡಲಗಾ ಗ್ರಾಮದ ಗಣಪತಿ ಮಂದಿರದ ಬಳಿ 17 ಗುಂಟೆ ಜಾಗದಲ್ಲಿ ಗುರುಭವನ ನಿರ್ಮಾಣಗೊಳ್ಳಲಿದೆ ಎಂದು  ಚನ್ನರಾಜ್‌ ಹಟ್ಟಿಹೊಳಿ ತಿಳಿಸಿದರು.


ಈ ವೇಳೆ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯಕುಮಾರ್‌ ಹೆಬ್ಳಿ, ಸಚಿವರು ನೀಡಿದ ಭರವಸೆಯಂತೆ ಅತ್ಯಂತ ಕಡಿಮೆ ಅವಧಿಯಲ್ಲಿ ಜಾಗವನ್ನು ಮಂಜೂರು ಮಾಡಿಸಿದ್ದಾರೆ. ಇಡೀ ಶಿಕ್ಷಕ ಬಳಗಕ್ಕೆ ಇದರಿಂದ ಸಂತೋಷವಾಗಿದೆ. ಇದಕ್ಕಾಗಿ ಸಮಸ್ತ ಶಿಕ್ಷಕರ ಬಳಗದ ವತಿಯಿಂದ ಧನ್ಯವಾದ ಅರ್ಪಿಸುತ್ತೇನೆ. ಗುರುಭವನ ನಿರ್ಮಾಣಕ್ಕೆ ಶೀಘ್ರವೇ ಶಂಕುಸ್ಥಾಪನೆ ಮಾಡಲಾಗುವುದು. ಜೊತೆಗೆ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ್‌ ಹಟ್ಟಿಹೊಳಿ ಅವರುಗಳನ್ನು ಸಾರ್ವಜನಿಕವಾಗಿ ಸನ್ಮಾನಿಸಲಾಗುವುದು ಎಂದರು.


ಈ ವೇಳೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌, ಡಿಡಿಪಿಐ ಲೀಲಾವತಿ ಹಿರೇಮಠ್, ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ, ಗ್ರಾಮೀಣ ಶಿಕ್ಷಣಾಧಿಕಾರಿ ಆಂಜನೇಯ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಿಕ್ಷಕರ ಸಂಘಟನೆಯ ಪರವಾಗಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಅವರನ್ನು ಸನ್ಮಾನಿಸಲಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ