Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯದ (ಐಸಿಪಿಎಸ್) ಬಾಲಕರ ಬಾಲಮಂದಿರ ಹಾಗೂ ಯಶೋದರಮ್ಮ ದಾಸಪ್ಪ ರಾಜ್ಯ ಮಹಿಳಾ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಬಾಲಕರ ಬಾಲ ಮಂದಿರದಲ್ಲಿ ವಿವಿಧ ರಾಜ್ಯಗಳಿಂದ 110 ಮಕ್ಕಳಿದ್ದು ಇಲಾಖೆ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳನ್ನು  ಪರಿಶೀಲನೆ ನಡೆಸಿದರು. ಮಹಿಳಾ ನಿಲಯ ಹಾಗೂ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೂ ಭೇಟಿ ನೀಡಿದ ಸಚಿವರು, ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಇಲಾಖೆಯಿಂದ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.


ಬಳಿಕ  ಸರ್ಕಾರಿ ಶಿಶು ಮಂದಿರಕ್ಕೂ  ಭೇಟಿ ನೀಡಿದ ಸಚಿವರು,  ಶಿಶುಗಳ ಪಾಲನೆ, ಪೋಷಣೆ ಹಾಗೂ ಪುಟಾಣಿಗಳ ಆರೈಕೆ ಕುರಿತು ಪರಿಶೀಲನೆ ನಡೆಸಿದರು.

ಆರು ವರ್ಷದ ಒಳಗಿನ 46 ಮಕ್ಕಳು ಕೇಂದ್ರದಲ್ಲಿದ್ದಾರೆ. ಶಿಶುಗಳ ಉತ್ತಮ ಆರೈಕೆಯು ಮಗುವಿನ ಆರೋಗ್ಯಕರ ಬೆಳವಣಿಗೆಗೆ ಅತ್ಯಗತ್ಯ ಎಂದು ಸಚಿವರು ಹೇಳಿದರು.

ಮಕ್ಕಳ ಪಾಲನೆ ಮಾಡುತ್ತಿರುವ ಸಿಬ್ಬಂದಿ ವರ್ಗದವರ ಕಾರ್ಯವೈಖರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಚಿಣ್ಣರನ್ನು‌ ಎತ್ತಿಕೊಂಡು ಮುದ್ದಾಡಿದರು.


ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ಉಪ ನಿರ್ದೇಶಕರಾದ ಸುಮಂಗಲಾ ಮಳಾಪುರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ