Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನುದಾನಿತ ಶಾಲೆಗಳ ಅತಿಥಿ ಶಿಕ್ಷಕರಿಗೂ ವೇತನಕ್ಕೆ ಪ್ರಯತ್ನ  : ಸಚಿವೆ  ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ :  ಅನುದಾನಿತ ಶಾಲೆಗಳ ಅತಿತಿ ಶಿಕ್ಷಕರಿಗೂ ಸರಕಾರದಿಂದ ವೇತನ ನೀಡುವ ಕುರಿತು ಪ್ರಯತ್ನ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.

ಭಾನುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ವಿಶ್ವ ಭಾರತ ಸೇವಾ ಸಮಿತಿ ವತಿಯಿಂದ ನಿವೃತ್ತ ಶಿಕ್ಷಕರಿಗೆ, ಸಾಧಕ ಶಿಕ್ಷಕರಿಗೆ ಹಾಗೂ ಸಾಧಕ ರೈತರಿಗಾಗಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶಿಕ್ಷಕರು ಹಾಗೂ ರೈತರನ್ನು ಸನ್ಮಾನಿಸಿ ಅವರು ಮಾತನಾಡಿದರು. ಅನುದಾನಿತ ಶಾಲೆಗಳ ಅತಿತಿ ಶಿಕ್ಷಕರಿಗೂ ಸರಕಾರದಿಂದ ವೇತನ ನೀಡುವಂತೆ ಬಹಳಷ್ಟು ಸಂಸ್ಥೆಗಳ ಪ್ರತಿನಿಧಿಗಳು ನನಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರ ಜೊತೆ ಚರ್ಚಿಸಿ ಅಗತ್ಯ ಕ್ರಮಕ್ಕೆ ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.


ಶಿಕ್ಷಕರ ಸ್ಥಾನ ಸಣ್ಣದಲ್ಲ, ಜನಸಾಮಾನ್ಯರಿಂದ ರಾಷ್ಟ್ರಪತಿಯವರೆಗೆ ಎಲ್ಲರ ಸಾಧನೆಯ ಹಿಂದೆ ಶಿಕ್ಷಕರ ಪಾತ್ರವಿದೆ. ಹಾಗಾಗಿ ಸಮಾಜದಲ್ಲಿ ಶಿಕ್ಷಕರಿಗೆ ದೊಡ್ಡ ಗೌರವವಿದೆ. ನಾನು ಈ ಸ್ಥಾನಕ್ಕೇರಲು ಶಿಕ್ಷಕರೇ ಕಾರಣ. ಶಿಕ್ಷಕರು ಕಲಿಸಿಕೊಟ್ಟ ಸಂಸ್ಕೃತಿ, ಪರಂಪರೆಯನ್ನು ನಾನೆಂದೂ ಮರೆತಿಲ್ಲ. ಹಾಗಾಗಿ ನಾನು ಶಿಕ್ಷಕರಿಗೆ ಸದಾ ಕೃತಜ್ಞನಾಗಿದ್ದೇನೆ ಎಂದು ಅವರು ಹೇಳಿದರು.


  ವಿಶ್ವ ಭಾರತ ಸೇವಾ ಸಮಿತಿ ಕಳೆದ 66 ವರ್ಷದಿಂದ ಬಹಳ ದೊಡ್ಡ ಕೆಲಸ ಮಾಡುತ್ತಿದೆ. ಬಹಳಷ್ಟು ಜನರಿಗೆ ಭವಿಷ್ಯ ಕೊಟ್ಟಿದೆ. ಈ ಸಂಸ್ಥೆಗೆ ಅಗತ್ಯವಾದ ಎಲ್ಲ ರೀತಿಯ ನೆರವನ್ನು ನೀಡಲು ನಾನು ಸಿದ್ಧನಿದ್ದೇನೆ ಎಂದು ಸಚಿವರು ತಿಳಿಸಿದರು.


ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯದ ಮಾಜಿ ಸಚಿವರಾದ ಭರಮು ಪಾಟೀಲ, ಮಾಜಿ ಶಾಸಕರಾದ ಪರಶುರಾಮ ಬಾವು ನಂದಿಹಳ್ಳಿ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ವಿಶ್ವ ಭಾರತ ಸೇವಾ ಸಮಿತಿಯ ಅಧ್ಯಕ್ಷರಾದ ವಿಜಯ ನಂದಿಹಳ್ಳಿ, ಶಿಕ್ಷಣಾಧಿಕಾರಿ ಆಂಜನೇಯ ಆರ್‌‌‌.ಕೆ, ಮನೋಹರ ಬೆಳಗಾಂವ್ಕರ್, ಯಲ್ಲಪ್ಪ ಬೆಳಗಾಂವ್ಕರ್, ಬಸವರಾಜ ಹಟ್ಟಿಹೊಳಿ, ಬವರಾಜ ತೆರಸೆ, ಯಶವಂತ ಸೋನಾರ್ ಮುಂತಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ