Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೀವನದಲ್ಲಿ ಸೋಲು-ಗೆಲುವನ್ನು ಸಮಾನಾವಾಗಿ ಸ್ವೀಕರಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಜೀವನದಲ್ಲಿ ಪ್ರತಿಯೊಬ್ಬರು ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಬೆಳಗಾವಿಯ ಕ್ಯಾಂಪ್ ಪ್ರದೇಶಲ್ಲಿರುವ ಸೆಂಟ್ ಪಾಲ್ ಹೈಸ್ಕೂಲ್ ನ ಎಡಿ ಮೆಮೋರಿಯಲ್ ಪುಟ್ಬಾಲ್ ಟೂರ್ನಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಸಚಿವರು, ಈ ಶಾಲೆಯ ಹಳೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಈ ಶಾಲೆಗೆ ಉತ್ತಮ ಹೆಸರಿದೆ ಎಂದು ಹೇಳಿದರು.


ಜೀವನದಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ನಾನು ಸತತ ಎರಡು ಬಾರಿ ಚುನಾವಣೆಯಲ್ಲಿ ಸೋತರೂ ಸತತ ಪ್ರಯತ್ನದಿಂದ  ಗೆದ್ದು, 7 ಕೋಟಿ ಜನಸಂಖ್ಯೆಯ ಕರ್ನಾಟಕದಲ್ಲಿ ಒಬ್ಬಳೇ ಮಹಿಳೆ ಮಂತ್ರಿಯಾಗಿರುವೆ. ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ, ಕ್ರೀಡಾ ಸ್ಪೂರ್ತಿಯನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.


ಕಳೆದ 56 ವರ್ಷಗಳಿಂದ ಈ ಟೂರ್ನಿ ನಡೆಯುತ್ತಾ ಬಂದಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ. ಜೊತೆಗೆ 26 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿರುವುದು ಖುಷಿ ವಿಚಾರ. ಇಂತಹ ಒಳ್ಳೆಯ ಪಂದ್ಯಾವಳಿಯನ್ನು ಆಯೋಜನೆ ಮಾಡಿದ್ದಕ್ಕಾಗಿ ಆಯೋಜಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಫಾದರ್ ಸೈಮನ್ ಫರ್ನಾಂಡೀಸ್, ಅಲುಮ್ನಿಯ ಅಧ್ಯಕ್ಷರಾದ ಡಾ. ಮಾಧವ ಪ್ರಭು, ಚಾಬ್ರಿಯಾ ಮತ್ತು ನಿಪ್ಪಾಣಿಕರ್ ಕುಟುಂಬದ ಸದಸ್ಯರು, ಫರೀಶ್ ಮುರಕುಟೆ, ಅಮಿತ್ ಪಾಟೀಲ, ಕಿರಣ ನಿಪ್ಪಾಣಿಕರ್, ಆದಿತ್ಯ, ಸಮಕ್ಷ ಚಾಬ್ರಿಯಾ, ಲಿನೋರಿಯಾ ಡಿಸೋಜಾ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ