Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಕ್ಷೇತ್ರಾಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ

ಬೆಳಗಾವಿ.06:  25 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ಇಂದು ಏಳು ಕೋಟಿ ಜನಸಂಖ್ಯೆಯ ಕರ್ನಾಟಕದ ಏಕೈಕ ಮಹಿಳಾ ಮಂತ್ರಿಯಾಗಿರುವೆ. ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ತೋರುವ ಮಹತ್ವ ಇದಾಗಿದೆ. ಸ್ಥಳೀಯ ಅಭ್ಯರ್ಥಿ, ನಿಮ್ಮ ಮನೆ ಮಗ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಅರಭಾವಿ‌ ವಿಧಾನಸಭಾ ಕ್ಷೇತ್ರದ ಮೆಳವಂಕಿ ಹಾಗೂ ಕೌಜಲಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಕಾರ್ಯಕರ್ತರು ಈ ಬಾರಿ ಮೈಮರೆಯದೆ ಕೆಲಸ ಮಾಡಬೇಕು ಎಂದು ಕರೆ ನೀಡಿದ

ಕಳೆದ 20 ವರ್ಷಗಳಿಂದ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸಂಸದರಿದ್ದರೂ ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ನೀಡದೆ, ಜನರಿಂದ ದೂರ ಉಳಿದರು. ಮೋದಿ ಹೆಸರಿನಲ್ಲಿ ಎರಡು ಬಾರಿ ಗೆದ್ದಿದ್ದೆ ಅವರ ಸಾಧನೆ ಎಂದು ಸಚಿವರು ಟೀಕಿಸಿದರು. ಈಗಿನ ಬಿಜೆಪಿ ಅಭ್ಯರ್ಥಿ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ಜಿಲ್ಲೆಯ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರು. ಹಾಗಾಗಿ ಸ್ಥಳೀಯ ಅಭ್ಯರ್ಥಿಗೆ ಮತ ನೀಡಿ ಎಂದರು.

ಸ್ಥಳೀಯ ಸಮಸ್ಯೆಗಳನ್ನು ಸರಿಯಾಗಿ ಅರಿತಿರುವ ಮೃಣಾಲ್‌ ಹೆಬ್ಬಾಳ್ಕರ್, ನಿಮ್ಮ ಧ್ವನಿಯಾಗಿ ದೆಹಲಿಯಲ್ಲಿ ಕೆಲಸ ಮಾಡಲಿದ್ದಾನೆ. ಇನ್ನೂ ಯುವಕನಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಂತೆ ಬೆಳಗಾವಿ ಕ್ಷೇತ್ರಕ್ಕೆ ಮೃಣಾಲ್‌ ಹೆಬ್ಬಾಳ್ಕರ್, ಚಿಕ್ಕೋಡಿ ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸುವಂತಾಗಬೇಕು ಎಂದರು‌.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ