Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಘ್ನ ಸಂತೋಷಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಅನಗತ್ಯ ರಾಜಕೀಯ ಮಾಡುವ ವಿಘ್ನ ಸಂತೋಷಿಗಳ ಕುರಿತು ನಾನು ತಲೆಕೆಡಿಸಿಕೊಳ್ಳುವುದಿಲ್ಲ,  ಅಭಿವೃದ್ಧಿ ವಿಚಾರದಲ್ಲಿ ನಾನು ಎಂದೂ ರಾಜಕೀಯ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಳಗಾ ಗ್ರಾಮದಲ್ಲಿ ಶನಿವಾರ, ರಾಯಚೂರು - ಬಾಚಿ ರಾಜ್ಯ ಹೆದ್ದಾರಿಯ 20 ಕಿಮೀ ಅಭಿವೃದ್ಧಿಪಡಿಸುವ 9 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಲೋಕೋಪಯೋಗಿ ಸಚಿವರೂ ಆಗಿರುವ ಸತೀಶ್ ಜಾರಕಿಹೊಳಿ ಜೊತೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಹೆಬ್ಬಾಳಕರ್, ಕೇವಲ ಭಾಷೆ, ಧರ್ಮದ ವಿಚಾರದಲ್ಲಿ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ರಾಜಕೀಯ ಮಾಡುತ್ತಾರೆ. ಅಂತವರಿಗೆ ಅಭಿವೃದ್ಧಿಯ ಅರ್ಥವೇ ಗೊತ್ತಿಲ್ಲ. ಅವರು ವಿಘ್ನ ಸಂತೋಷಿಗಳು. ಈ ಬಾರಿ ನಿರಂತರ ಮಳೆಯಿಂದಾಗಿ ಹಲವು ಕಾಮಗಾರಿಗಳು ವಿಳಂಬವಾಗಿವೆ. ಆದರೆ ಅಭಿವೃದ್ಧಿ ವಿಚಾರದಲ್ಲಿ ನಾನು ಯಾವತ್ತೂ ರಾಜಕೀಯ ಮಾಡುವುದಿಲ್ಲ, ಯಾರು, ಯಾವ ಪಕ್ಷ, ಯಾವ ಜಾತಿ ಎನ್ನುವ ಕುರಿತು ಯೋಚಿಸುವುದೂ ಇಲ್ಲ ಎಂದರು.


ಮಕ್ಕಳನ್ನು ಶಾಲೆಗೆ ದಾಖಲು ಮಾಡಿಸಲು, ಹಾಸ್ಟೆಲ್ ಗೆ ಸೇರಿಸಲು, ವರ್ಗಾವಣೆ ಮಾಡಿಸಿಕೊಳ್ಳಲು ಹೀಗೆ ಹಲವು ವಿಚಾರಗಳಿಗೆ ಜನರು ನನ್ನ ಬಳಿ ಬರುತ್ತಾರೆ. ನಿತ್ಯ ನೂರಾರು ಜನರು ಬಂದು ಕೆಲಸ ಮಾಡಿಸಿಕೊಳ್ಳುತ್ತಾರೆ. ಯಾವುದೇ ವಿಷಯಕ್ಕೆ ನನ್ನ ಬಳಿ ಬಂದರೂ ಪರಿಹಾರ ನೀಡುತ್ತಾ ಬಂದಿದ್ದೇನೆ.  ಇಡೀ ರಾಜ್ಯಕ್ಕೆ ನಾನು ಮಂತ್ರಿ ಇರಬಹುದು, ಆದರೆ ಗ್ರಾಮೀಣ ಕ್ಷೇತ್ರಕ್ಕೆ ಎಂದಿಗೂ ಮನೆ ಮಗಳು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಎಪಿಎಂಸಿ ಮಾಜಿ ಅಧ್ಯಕ್ಷ ಯುವರಾಜ ಕದಂ ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಪ್ರತಿ ವರ್ಷ ಸಾವಿರಾರು ಕೋಟಿ ರೂ. ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡುತ್ತಿದ್ದಾರೆ. ಯಾವುದೇ ಸಮಸ್ಯೆ ಹೇಳಿದರೂ ತಕ್ಷಣ ಸ್ಪಂದಿಸಿ ಕೆಲಸ ಮಾಡಿಕೊಡುತ್ತಾರೆ. ಇಂತವರನ್ನು ಶಾಸಕರನ್ನಾಗಿ ಪಡೆದಿರುವುದು ನಮ್ಮ ಪುಣ್ಯ ಎಂದರು.

ಸಚಿವ ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್‌ ಹೆಬ್ಬಾಳಕರ್, ಮುಖಂಡರಾದ ಬಾಬಣ್ಣ ನರೋಟಿ, ಸಂಜಯ್‌ ಪಾಟೀಲ್, ಮಾರುತಿ ಪಾಟೀಲ್, ಮಹದೇವ್ ಕಂಗ್ರಾಳ್ಕರ್, ಬಾವುರಾವ್ ಗಡ್ಕರಿ ಸೇರಿದಂತೆ ಸುಳಗಾ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.


 * *ರೈತ ಸಮುದಾಯ ಭವನಕ್ಕೆ ಶಂಕುಸ್ಥಾಪನೆ*

ಸುಳಗಾ ಗ್ರಾಮದಲ್ಲಿ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ರೈತ ಸಮುದಾಯ ಭವನ ನಿರ್ಮಾಣಕ್ಕೆ ಸಚಿವರು ಗುದ್ದಲಿ ಪೂಜೆ ನೆರವೇರಿಸಿದರು‌. ಸಮುದಾಯ ಭವನ ನಿರ್ಮಾಣದಿಂದ ರೈತರಿಗೆ, ಮಹಿಳಾ ಮಂಡಳಿಗೆ ಸಭೆ ಮಾಡಲು ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.

ಕಾಮಗಾರಿ ಸ್ಥಳೀಯರ ಸಲಹೆಯಂತೆ ನಡೆಯಬೇಕು. ಅತ್ಯಂತ ಸುಂದರ ಭವನ ನಿರ್ಮಾಣವಾಗಬೇಕು. ಇದು ಬೇರೆ ಕಡೆ ಮಾಡುವುದಕ್ಕೆ ಮಾದರಿಯಾಗಬೇಕು ಎಂದು ಸಚಿವರು ಗುತ್ತಿಗೆದಾರರಿಗೆ ಸೂಚಿಸಿದರು.


ವೇದಿಕೆಯಲ್ಲೇ ಗಳಗಳ ಅತ್ತ ವ್ಯಕ್ತಿ


ಸುಳಗಾದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ವೇದಿಕೆಗೆ ಬಂದ ವ್ಯಕ್ತಿಯೋರ್ವ ಸಚಿವರ ನೆರವು ನೆನಪಿಸಿಕೊಂಡು, ನಿಮ್ಮ ಋಣವನ್ನು ತೀರಿಸಲು ನನ್ನಿಂದ ಸಾಧ್ಯವಿಲ್ಲ ಎನ್ನುತ್ತ ಗಳಗಳನೆ ಅತ್ತುಬಿಟ್ಟ. ಬೊಮ್ಮಣ್ಣ ಪೋಟೆ ಎನ್ನುವ ವ್ಯಕ್ತಿ ವೇದಿಕೆಗೆ ಬಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕೆಲಸಗಳು ಎಲ್ಲರಿಗೂ ಆದರ್ಶ. ನನ್ನ ಸಹೋದರಿಗೆ ಹೃದಯದ ಕಾಯಿಲೆ ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಿಸಿ, ಶಸ್ತ್ರ ಚಿಕಿತ್ಸೆ ಮಾಡಿಸಲು ನೆರವಾದರು. ನಂತರ ಸಹೋದರಿಯ ಮಗಳಿಗೆ ಉತ್ತಮವಾಗ ಉದ್ಯೋಗ ಒದಗಿಸಿಕೊಟ್ಟು ಜೀವನಕ್ಕೆ ದಾರಿ ಮಾಡಿಕೊಟ್ಟರು. ನಮ್ಮ ಎಲ್ಲ ಕಷ್ಟದ ಸಂದರ್ಭದಲ್ಲೂ ಸಚಿವರು ನೆರವಿಗೆ ನಿಂತರು. ಇದು ನನಗೊಬ್ಬನಿಗೇ ಅಲ್ಲ, ಇಡೀ ಕ್ಷೇತ್ರದ ಜನರಿಗೆ ಅವರು ಕಷ್ಟದ ಸಂದರ್ಭದಲ್ಲಿ ನೆರವಾಗುತ್ತಿದ್ದಾರೆ. ಅವರ ಋಣವನ್ನು ಎಂದಿಗೂ ನನ್ನಿಂದ ತೀರಿಸಲು ಸಾಧ್ಯವಿಲ್ಲ. ಜೀವನ ಪರ್ಯಂತ ನಾನು ನಿಮ್ಮ ಸೇವಕನಾಗಿರಲು ಸಿದ್ಧ ಎನ್ನುತ್ತ ಜೋರಾಗಿ ಅತ್ತುಬಿಟ್ಟ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ