Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತುಮಕೂರು: ಕಾಂಗ್ರೆಸ್ ಶಿಸ್ತಿನ ಪಕ್ಷ, ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌


ತುಮಕೂರಿನ ಬಾಲಭವನ ಆವರಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.


ಕಾಂಗ್ರೆಸ್ ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ಹೆಚ್ಚಳವಾಗಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,

ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯನವರು  ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಿಎಂ ಚೇರ್ ಖಾಲಿ ಇಲ್ಲ ಎಂದರು.


ಇನ್ನು ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಒಂದೇ ಒಂದು ಕೂಡ ಡಿಲೀಟ್ ಆಗಿಲ್ಲ. ಯಾರು ಜಿ‌ಎಸ್ ಟಿ, ಆದಾಯ ತೆರಿಗೆ ಕಟ್ಟುತ್ತಿದ್ದಾರೆ,  ಅಂತಹವರದ್ದು ಅವರು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಮಾಡಿದ್ದೇವೆ. ನೋಂದಣಿ ಆದ  ಬಳಿಕ ನಾವು ಡಿಲೀಟ್ ಮಾಡಿಲ್ಲ ಎಂದರು‌


ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದ್ದು, ಶೀಘ್ರವೇ 12ನೇ ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು.


 *ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಆಗದ ವಿಚಾರ*


ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಸಂಬಳ ಕೊಡಲಾಗುತ್ತದೆ. ಈ ರೀತಿಯ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ. ಕೇಂದ್ರ‌ ಸರ್ಕಾರ ಬಿಡುಗಡೆ ಮಾಡಿದಾಗ ನಾವು ರಾಜ್ಯ ಸರ್ಕಾರದ ಮೊತ್ತ ಸೇರಿಸಿ ಸಂಬಳ ನೀಡಬೇಕಾಗುತ್ತದೆ. ಕೇಂದ್ರದಿಂದ ಹಣ ಇನ್ನೂ ಬಂದಿಲ್ಲ. ಈಗಾಗಲೇ ನಾವು ಮೂರು ನಾಲ್ಕು ಬಾರಿ ಪತ್ರ ಬರೆದಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ನಮ್ಮ ಇಲಾಖೆ ನಿರ್ದೇಶಕರು ಮೊನ್ನೆಯಷ್ಟೇ ದೆಹಲಿಗೆ ಹೋಗಿ ಬಂದಿದ್ದಾರೆ. ಆದಷ್ಟು ಬೇಗ ನೀಡಲಾಗುವುದು. ಗಣಪತಿ ಹಬ್ಬದ ಒಳಗೆ ಸಂಬಳ ನೀಡುವ ಪ್ರಯತ್ನಿಸಲಾಗುವುದು ಎಂದರು.


ನಮ್ಮ ಇಲಾಖೆಯಲ್ಲಿ ಬಹಳಷ್ಟು ಯೋಜನೆಗಳಿಗೆ ಎರಡೂ ಸರ್ಕಾರದ ಅನುದಾನ ಬಳಕೆ ಆಗುತ್ತದೆ. ವಿಳಂಬ ಮೊದಲಿನಿಂದಲೂ ಆಗಿದೆ, ಇನ್ಮುಂದೆ ಈ ರೀತಿ ಆಗದ ಹಾಗೆ ನೋಡಿಕೊಳ್ಳಲಾಗುವುದು ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ