Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಸ್ನೇಹಿ ರಾಜಕಾರಣ ನನ್ನ ಉದ್ದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್






ಬೆಳಗಾವಿ:  ಅಭಿವೃದ್ಧಿಯೇ ನನ್ನ ಮೂಲಮಂತ್ರ. ಅಭಿವೃದ್ಧಿಯಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ. ಜನಸ್ನೇಹಿ ರಾಜಕಾರಣವೇ ನನ್ನ ಉದ್ಧೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.


ಹಿಂಡಲಗಾ ಜಯನಗರದಲ್ಲಿ ನೈಸರ್ಗಿಕ ಅನಿಲ ಪೈಪ್‌ಲೈನ್ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, 

ಜಯನಗರ ಬಡಾವಣೆಗೆ ಅಗತ್ಯ ಅನುದಾನ ನೀಡಿ, ಸಮಗ್ರವಾಗಿ ಅಭಿವೃದ್ದಿಪಡಿಸಲಾಗುವುದು ಎಂದರು.

15 ದಿನದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಮಲ್ಲಿಕಾರ್ಜುನ ದೇವಸ್ಥಾನದ ಎದುರು  ಕಾರ್ಯಕ್ರಮಗಳನ್ನು ನಡೆಸಲು 25 ಲಕ್ಷ ರೂ ಅನುದಾನದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಡಲಾಗುವುದು. ಸಮರ್ಪಕ ಕುಡಿಯುವ ನೀರಿನ ಸೌಲಭ್ಯ, ದೇವಸ್ಥಾನದ ಮುಂದೆ ಗಾರ್ಡನ್ ನಿರ್ಮಾಣ ಮಾಡಲಾಗುವುದು. 6 ತಿಂಗಳೊಳಗಾಗಿ ಅತ್ಯುತ್ತಮ ರಸ್ತೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು. 



ಹೆಬ್ಬಾಳಕರ್ ವಿನಯಶೀಲ ರಾಜಕಾರಣಿ


 ದೇವಸ್ಥಾನ ಟ್ರಸ್ಟ್‌ ಅಧ್ಯಕ್ಷ ಬಿ.ಎಂ.ಹೊಸಪೇಟೆ ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಅವರು ವಿನಯಶೀಲ ರಾಜಕಾರಣಿ. ಸದಾ ಜನರಿಗೆ ಸ್ಪಂದಿಸುವ ಅಪರೂಪದ ವ್ಯಕ್ತಿತ್ವ ಅವರದ್ದು. ಈ ಹಿಂದೆ ನಾವು ಕೇಳದಿದ್ದರೂ ಬಡಾವಣೆಯಲ್ಲಿ ಹಲವಾರು ಕಾರ್ಯಕ್ರಮ ಮಾಡಿಕೊಟ್ಟಿದ್ದಾರೆ. ದೇವಸ್ಥಾನ ನಿರ್ಮಾಣಕ್ಕೆ ಅನುದಾನ ಒದಗಿಸಿದ್ದಾರೆ. 18 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಿಸಿದ್ದಾರೆ. ವಾಕಿಂಗ್ ಟ್ರ್ಯಾಕ್ ನಿರ್ಮಾಣ ಮಾಡಿಸಿದ್ದಾರೆ. ದೇವಸ್ಥಾನದ ಆವರಣದಲ್ಲಿ ಪೇವರ್ಸ ಅಳವಡಿಸಿಕೊಟ್ಟಿದ್ದಾರೆ. ಅವರ ಕಾರ್ಯವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇಂತಹ ರಾಜಕಾರಣಿ ಸಿಗುವುದು ಬಹಳ ಅಪರೂಪ ಎಂದರು. 

ಈ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಮಹಾನಗರ ಪಾಲಿಕೆಯ ಸದಸ್ಯ ಮುಸ್ತಾಕ್ ಮುಲ್ಲಾ, ಮೆಗಾ ಗ್ಯಾಸ್ ವ್ಯವಸ್ಥಾಪಕ ಸುಶಾಂತ, ಉಪ ವ್ಯವಸ್ಥಾಪಕ ಮಯೂರ್ ಹಿರೇಮಠ್ ಹಾಗೂ ಸ್ಥಳೀಯ ಮುಖಂಡರು, ಮಹಿಳೆಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.















Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*