LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಖಾನಾಪೂರ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಭೀತಿಯಲ್ಲಿರುವ ಖಾನಾಪೂರ ತಾಲೂಕಿನ ಮಲಪ್ರಭಾ ಬ್ರಿಡ್ಜ್ ಮತ್ತು ರುಮೇವಾಡಿ ಬ್ಯಾರೇಜ್ ವೀಕ್ಷಿಸಿ, ಪ್ರವಾಹದಿಂದ ನಾಶವಾಗಿರುವ ಮನೆ, ಬೆಳೆ ಹಾಗೂ ಬ್ರಿಡ್ಜ್ ಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.


ಖಾನಾಪೂರ ತಾಲೂಕಿನ ಪಶ್ಚಿಮಘಟ್ಟಗಳ ಪ್ರದೇಶದಲ್ಲಿರುವ ಗುಡ್ಡದ ಮಧ್ಯೆಯದಲ್ಲಿರುವ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದೇ ನಮ್ಮ ಉದ್ದೇಶ. ಮುಂದಿನ ದಿನಗಳಲ್ಲಿ ಮಳೆಯಿಂದ ಜೀವಹಾನಿಯಾಗದಂತೆ ಕ್ರಮಕೈಗೊಳ್ಳಲಾಗುವುದು. ಅರಣ್ಯ‌ ಇಲಾಖೆಯ ಕಠಿಣ ನಿಲುವುಗಳಿಂದ ಕೆಲ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡಲು ಸಾಧ್ಯವಾಗುತ್ತಿಲ್ಲ ಎಂದರು.


 ಮನೆ ಬಿದ್ದ ತಕ್ಷಣ 1.20 ಲಕ್ಷ ರೂಪಾಯಿ ಹಣ, ಜೊತೆಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 1.80 ಲಕ್ಷ ಹಣ ನೀಡಲಾಗುತ್ತಿದ್ದು, ಭಾಗಶಃ ಬಿದ್ದ  ಮನೆಗೆ ನೀಡಲಾಗುತ್ತಿರುವ ಮೊತ್ತವನ್ನು 10 ಸಾವಿರ‌ ರೂಪಾಯಿಂದ  50 ಸಾವಿರ ರೂಪಾಯಿಗೆ ಏರಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.


ಮಳೆಗಾಲದ ವೇಳೆ ಬೆಳಗಾವಿ - ಗೋವಾ ನಡುವಿನ ಮುಖ್ಯ ರಸ್ತೆ ಜಾಮ್ ಆಗುತ್ತಿದ್ದು, ಶೀಘ್ರವೇ ಗೋವಾ ಮುಖ್ಯ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದ್ದು, 100 ಕೋಟಿ ವೆಚ್ಚದಲ್ಲಿ ಹಟ್ಟಿಹೊಳಿ ಬ್ರಿಡ್ಜ್ ನಿರ್ಮಾಣವಾಗಲಿದೆ ಎಂದು‌ ಹೇಳಿದರು.


ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಪಾದಯಾತ್ರೆ ಮಾಡುತ್ತಿರುವ ಪ್ರತಿಯೊಬ್ಬರಿಗೂ ಶುಭಾಶಯಗಳು, ಮಳೆ ಬರುತ್ತಿರುವ ಕಾರಣ ಒಳ್ಳೆಯ ಶೂ, ರೈನ್ ಕೋಟ್ ತೆಗೆದುಕೊಂಡು ಹೋಗಲಿ ಎಂದು ಸಚಿವರು ಹೇಳಿದರು.


ಈ ವೇಳೆ ಸ್ಥಳೀಯ ಖಾನಾಪುರ ಶಾಸಕರಾದ ವಿಠ್ಠಲ ಹಲಗೇಕರ್, ನೀರಾವರಿ ಹಾಗೂ ಕಂದಾಯ ಇಲಾಖೆ, ನೀರಾವರಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್