ವಿಜಯಪುರ : ಮಕ್ಕಳ ದಿನಾಚರಣೆ ಪ್ರಯುಕ್ತ ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಅವರು ನಗರದ ಹೂರವಲಯದ ಬಾಗಲಕೋಟ ರಸ್ತೆ ಹತ್ತಿರ ಬರಮಾಡಿಕೊಂಡು ಆತ್ಮೀಯವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿಡಿಎ ಮಾಜಿ ಅಧ್ಯಕ್ಷ ಕನ್ನಾನ ಅಬ್ದುಲ್ ಹಮೀದ್ ಮುಶ್ರೀಫ್ ಸೇರಿದಂತೆ ವಿವಿಧ ಮುಖಂಡರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಇದ್ದರು.