ಬೆಂಗಳೂರು, ಆಗಸ್ಟ್ 24: ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸುಳಿವು ನೀಡಿದ್ದಾರೆ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್ಸಿ) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ (ಕೆಟಿಆರ್ಸಿ) ರಚನೆಗೆ ಸರ್ಕಾರ ಮುಂದಾಗಿದೆ ಎಂಬ ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವರು, ಹಿಂದಿನ ಬಿಜೆಪಿ ಸರ್ಕಾರ ಸಂಸ್ಥೆಯನ್ನು ನಷ್ಟದಲ್ಲಿಟ್ಟು ಹೋಗಿದೆ. ಪರಿಣಾಮವಾಗಿ ದರ ಏರಿಕೆ ಅನಿಬಾರ್ಯವಾಗಿದೆ ಎಂದಿದ್ದಾರೆ. ಆ ಮೂಲಕ ಟಿಕೆಟ್ ದರ ಏರಿಕೆಯ ಸುಳಿವು ನೀಡಿದ್ದಾರೆ.
ಬಸ್ ದರ ಏರಿಕೆಗೆ ಹೊಸ ಆಯೋಗ, ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದರು. ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್ ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ. ಆಡಳಿತ ಮಾಡುವಲ್ಲಿ ಮೂರು ಕಾಸು ಪ್ರಯೋಜನ ಇಲ್ಲದಿದ್ದರೂ ಜನರಿಗೆ ಮಂಕು ಬೂದು ಎರಚಿ ಹೊಸ ಪ್ರಯೋಗಗಳ ಮೂಲಕ ಜನರನ್ನ ಸುಲಿಗೆ ಮಾಡುವಲ್ಲಿ ಕಾಂಗ್ರೆಸ್ ಪಕ್ಷದವರು ಬಹಳ ನಿಸ್ಸೀಮರು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.