ಬೆಂಗಳೂರು. ಕರ್ನಾಟಕ ರಾಜ್ಯದ ಮಂತ್ರಿ ಮಂಡಳದ ಸಚಿವ ಸಂಪುಟದಲ್ಲಿ 5 ನೇ ಭಾರಿಗೆ ಸಚಿವರಾಗಿ ಆಯ್ಕೆಯಾದ ಸಚಿವ ಸತೀಶ ಜಾರಕಿಹೊಳಿ ಅವರ ಗೃಹ ಕಚೇರಿಗೆ ಕೆಪಿಸಿಸಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ನಾಯಕರಾದ ಬಿ ಕೆ ಹರಿಪ್ರಸಾದ ಅವರು ಬೇಟಿ ಮಾಡಿ ಶುಭ ಕೋರಿದರು. ಅದೇ ರೀತಿ ಸಚಿವ ಸತೀಶ ಜಾರಕಿಹೊಳಿ ಅವರು ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಶಾಸಕ ಆಸೀಫ್ ( ರಾಜು ) ಸೇಠ್, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಇದ್ದರು.
