Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಥಣಿ ಕ್ಷೇತ್ರದಿಂದ ಅಧಿಕ ಮತಗಳು ಬರುತ್ತೇವೆ ಎಂಬ ನಿರೀಕ್ಷೆ ಇದೆ: ಸಚಿವ ಸತೀಶ್ ಜಾರಕಿಹೊಳಿ

ಅಥಣಿ01: ಅಥಣಿ ಮತಕ್ಷೇತ್ರದಿಂದ ಚಿಕ್ಕೋಡಿ ಲೋಕಸಭೆ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿಗೆ ಹೆಚ್ಚಿನ ಮತಗಳು ಬರುತ್ತೇವೆ ಎಂದು ನಿರೀಕ್ಷೆ ಇದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.


ಅಥಣಿ ತಾಲೂಕಿನ ಐಗಳಿ ಕ್ರಾಸ್ ನಲ್ಲಿ ಹಮ್ಮಿಕೊಂಡಿದ್ದ ತೇಲಸಂಗ, ಐಗಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.


ಸ್ಥಳೀಯ ಶಾಸಕರು, ಮಾಜಿ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ಅಥಣಿ ಕ್ಷೇತ್ರವನ್ನು ಈಗಾಗಲೇ ಅಭಿವೃದ್ಧಿಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ನಿಮ್ಮ ತಾಲೂಕಿಗೆ ನೀರಾವರಿ ಯೋಜನೆ ಸೇರಿದಂತೆ ಸಾವಿರಾರು ಕೋಟಿ ರೂ. ಅನುದಾನ ನೀಡಿದ್ದಾರೆ ಎಂದರು.


ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಾಕಷ್ಟು ಸಭೆ, ಸಮಾರಂಭಗಳಲ್ಲಿ ಹೇಳಿದ್ದೇನೆ. ಈಗ ಚುನಾವಣೆಗೆ ನಾಲ್ಕೈದು ದಿನಗಳು ಮಾತ್ರ ಬಾಕಿ ಇದ್ದು, ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಎಂದು ಕರೆ ನೀಡಿದರು.


ಇನ್ನು ಅಥಣಿ ಕ್ಷೇತ್ರದಲ್ಲಿ ಎಲ್ಲರಿಗೂ ಕಾರ್ಡಗಳು ಮುಟ್ಟಿಲ್ಲವೆಂಬ ಮಾಹಿತಿ ಇದೆ. ಕಡಿಮೆ ಅವಧಿ ಇರುವುದರಿಂದ ಎಲ್ಲರಿಗೂ ಗ್ಯಾರಂಟಿ ಕಾರ್ಡುಗಳನ್ನು ಮುಟ್ಟಿಸುವ ಕೆಲಸವಾಗಬೇಕೆಂದು ಸಲಹೆ ನೀಡಿದರು.


ಚಿಕ್ಕೋಡಿ ಲೋಕಸಭೆ ಕ್ಷೇತ್ರದ  ಇಂದಿನವರೆಗಿನ ರಾಜಕೀಯ ಬೆಳವಣಿಗೆ ನೋಡಿದರೆ ಜಯ  ಈಗಾಗಲೇ ಕಾಂಗ್ರೆಸ್ ಪಕ್ಷದ ಬಾಗಿಲಿಗೆ ನಿಂತಿದೆ. ಆದ್ದರಿಂದ ಕಾರ್ಯಕರ್ತರು ಚುನಾವಣೆ ಬಗ್ಗೆ ನಾಲ್ಕೈದು ದಿನ ಹಗಲಿರುಳು ಶ್ರಮಿಸಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.


ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ವಿರೋಧ ಪಕ್ಷದ ವೈಫಲ್ಯ ಜನತೆ ತಿಳಿಸಿ, ನಮ್ಮ ಪಕ್ಷದ ಅಭಿವೃದ್ಧಿಗಳನ್ನು, ಸಿಎಂ ಸಿದ್ದರಾಮಯ್ಯನವರ ನಮಗೆ ನೀಡಿದ ಅನುದಾನ ಬಗ್ಗೆಯೂ ತಿಳಿಸಿ, 2 ಸಾವಿರ ಕೋಟಿ ಅನುದಾನ ಅಥಣಿಗೆ ಸಿಕ್ಕಿದೆ. ಸಿಎಂ, ಸಚಿವ ಸತೀಶ್ ಜಾರಕಿಹೊಳಿ ಅವರು ನಮ್ಮ ಕ್ಷೇತ್ರದ ಮೇಲೆ ಬಹಳ ವಿಶ್ವಾಸ ಇಟ್ಟಿದ್ದಾರೆ. ಕಾರಣ ಪ್ರಿಯಂಕಾ ಜಾರಕಿಹೊಳಿ ಅವರನ್ನು ಗೆಲ್ಲಿಸುವ ಮೂಲಕ ಅವರ ಇಟ್ಟ ವಿಶ್ವಾಸ ಉಳಿಸಿಕೊಳ್ಳೋಣ ಎಂದರು.


ಈಗ ವಿರೋಧ ಪಕ್ಷದ  ಟೀಕೆ ಮಾಡುವ ಸಮಯವಲ್ಲ. ಎಲ್ಲಾ ಪಕ್ಷದಲ್ಲಿಯೂ ಸಾಂಪ್ರದಾಯಿಕ ಮತಗಳು ಇವೆ. ಆದರೆ ಅವರನ್ನು ಹೋಗಿ ತಲುಪುವ ಕೆಲಸವಾಗಬೇಕೆಂದು ಶಾಸಕ ಲಕ್ಷ್ಮಣ ಸವದಿ ಕೋರಿದರು.


ಕಾಂಗ್ರೆಸ್ ಮುಖಂಡ ಸದಾಶಿವ ಬೂಟಾಳೆ ಮಾತನಾಡಿ, ಅಥಣಿ ಮತಕ್ಷೇತ್ರದದಿಂದ 80 ಸಾವಿರಕ್ಕೂ ಹೆಚ್ಚಿನ ಮತಗಳನ್ನು ನೀಡುತ್ತೇವೆ. ತಾಲೂಕಿನಲ್ಲಿ ವಿರೋಧ ಪಕ್ಷ ಇದೆ ಎಂಬುವುದು ನಮಗೆ ಕಾಣುತ್ತಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಬಗ್ಗೆ ವ್ಯಂಗ್ಯವಾಡಿದರು.


ತೇಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮೋಘ ಸಿದ್ದ ಕೊಬ್ಬರಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಗಜಾನನ ಮಂಗಸೂಳಿ, ಅನೀಲ್ ಸುಳೆಬಾವಿ, ಪತ್ತಾರ ವಕೀಲರು, ಟಕ್ಕಣ್ಣವರ್ ವಕೀಲರು, ಬಸವರಾಜ ಬೂಟಾಳೆ, ಕೆಪಿಸಿಸಿ ಸದಸ್ಯ ಚಿದಾನಂದ ಮುಗಳಿ, ಶೇಖರ ನ್ಯಾಮಗೌಡ, ರಾಜಾ ಸಲೀಂ,  ರಜಾಕ್‌ ಮುಲ್ಲಾ, ನಿಖಿತಾ ಗದಾಡೆ ಸೇರಿದಂತೆ ಸಾವಿರಾರು ಕಾರ್ಯಕರ್ತರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ