Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಿಂಗಾಯತ ಧರ್ಮ ಅರ್ಥೈಸಿಕೊಳ್ಳುವ ಅಗತ್ಯವಿದೆ-ಸಚಿವ ಸತೀಶ ಜಾರಕಿಹೊಳಿ

ಹುಕ್ಕೇರಿ : ಕರ್ನಾಟಕದ ಸಾಂಸ್ಕೃತಿಕ ರಾಯಬಾರಿ ಬಸವಣ್ಣನವರು ಕಟ್ಟಿರುವ ಲಿಂಗಾಯತ ಧರ್ಮವನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕಿರುವ ಅಗತ್ಯವಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು.


ತಾಲೂಕಿನ ಬೆಳವಿ ಗ್ರಾಮದ ಚರಮೂರ್ತಿ ಚರಂತೇಶ್ವರ ವಿರಕ್ತಮಠದಲ್ಲಿ ಶುಕ್ರವಾರ ರಾತ್ರಿ ನಡೆದ ಬಸವ ಜಯಂತಿ ಸಂಭ್ರಮೋತ್ಸವ ಮತ್ತು ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ ಅವರು, ಸ್ವತಂತ್ರ ಧರ್ಮ ಎನಿಸಿರುವ ಲಿಂಗಾಯತ ಧರ್ಮದ ಬೆಳವಣಿಗೆಗೆ ಕೆಲ ಪಟ್ಟಭದ್ರ ಸಾಂಪ್ರದಾಯಿಗಳಿAದ ಹಿನ್ನಡೆಯಾಗಿದೆ ಎಂದರು.


ಪ್ರಸ್ತುತ ದಿನಗಳಲ್ಲಿ ಬಸವಣ್ಣನವರ ವಿಚಾರಧಾರೆ, ಕಾಯಕ ತತ್ವದ ಅಧ್ಯಯನ ಮಾಡಬೇಕಿರುವ ಅಗತ್ಯವಿದೆ. ಇಂದಿನ ಜಾತಿ ವ್ಯವಸ್ಥೆ ಹೋಗಲಾಡಿಸಲು ಬಸವೇಶ್ವರರ ಸಿದ್ಧಾಂತದ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಮಹಾನ್ ಪುರುಷರು ತೋರಿರುವ ಸನ್ಮಾರ್ಗದಲ್ಲಿ ನಾವೆಲ್ಲ ಸಾಗಬೇಕು ಎಂದು ಅವರು ಹೇಳಿದರು.


ಶರಣ ಬಸವ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಇಳಕಲ್ ಗುರು ಮಹಾಂತ ಸ್ವಾಮೀಜಿ, ಮುಖಂಡ ಮಹಾವೀರ ಮೋಹಿತೆ, ನಿವೃತ್ತ ಪ್ರಾಧ್ಯಾಪಕ ಡಾ.ಗುರುಪಾದ ಮರೆಗುದ್ದಿ, ಡಾ.ಜಯಪ್ರಕಾಶ ಕರಜಗಿ, ಮಹಾಂತೇಶ ತಾಂವಶಿ, ಸಂಗಪ್ಪ ಸರಿಕರ, ರಾಜಶೇಖರ ಯಂಕಚಿ, ವಿಜಯ ರವದಿ ಮತ್ತಿತರರು ಉಪಸ್ಥಿತರಿದ್ದರು.


ಇದೇ ವೇಳೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಬಸವ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಮಕೃಷ್ಣ ಪಾನಬುಡೆ ನಿರೂಪಿಸಿದರು. ಶ್ರೀಶೈಲ ಮಠಪತಿ ವಂದಿಸಿದರು. ಇದಕ್ಕೂ  ಮೊದಲು ಶೂನ್ಯ ಲಿಂಗ ವಿವೇಚನೆ, ವಚನ ಶಾಸ್ತç ಭಾಗ-೧ರ ವಿಶ್ಲೇಷಣೆ ನಡೆಯಿತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ