Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧುಪದಾಳ ಜಲಾಶಯಕ್ಕೆ ಭೇಟಿ ನೀಡಿ ನೀರಿನ ಮಟ್ಟ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ





ಬೆಳಗಾವಿ,ಏಪ್ರಿಲ್ 02: ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಘಟಪ್ರಭಾ ಹಾಗೂ ಹಿರಣ್ಯಕೇಶಿ‌ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ನೀರಿನ‌ ಸಂಗ್ರಹದ ಸಾಮರ್ಥ್ಯವನ್ನು ಪರಿಶೀಲಿಸಿದರು.


ಇದೇ ವೇಳೆ  ನೀರಿನ ಸಂಗ್ರಹ ಹೆಚ್ಚಿಗೆ ಮಾಡಲು ಯೋಜನೆ ರೂಪಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ವೇಳೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ ಅವರು, ಈ ಆಣೆಕಟ್ಟಿನ ಸಾಮರ್ಥ್ಯವನ್ನು ಹೆಚ್ಚಿಸುವುದರಿಂದ ರೈತರು ಹಾಗೂ ಸಾರ್ವಜನಿಕರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ. ಇದೇ ಸಂದರ್ಭದಲ್ಲಿ  ಜನ‌-ಜಾನುವಾರುಗಳ ಕುಡಿಯುವ ನೀರಿನ ಬವಣೆಯನ್ನು ನೀಗಿಸಲು ಏಪ್ರಿಲ್‌ 1 ರಿಂದ ಹಿಡಕಲ್ ಜಲಾಶಯದಿಂದ 2 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಹಾಗೂ ಮಳೆಯ ಕೊರತೆಯಿಂದಾಗಿ ಜನ- ಜಾನುವಾರುಗಳಿಗೆ ನೀರಿನ ಅಭಾವ ಉಂಟಾಗಿದ್ದು, ಹಿಡಕಲ್ ಜಲಾಶಯದಿಂದ ಘಟಪ್ರಭೆ ನದಿಗೆ ಕುಡಿಯುವ ಉದ್ದೇಶಕ್ಕಾಗಿ ಬಾಗಲಕೋಟ ಮತ್ತು ಮಾರ್ಗ ಮಧ್ಯದ ಹಳ್ಳಿಗಳಿಗೆ ಸರ್ಕಾರದ ಆದೇಶದನ್ವಯ ಕಾಯ್ದಿರಿಸಿದ 2. ಟಿ.ಎಂ.ಸಿ ನೀರನ್ನು ಹರಿಸಲಾಗುತ್ತಿದೆ. ಸದ್ಯ  ಬರಗಾಲವಿರುವ ಕಾರಣ ನೀರನ್ನು ಮಿತವಾಗಿ ಬಳಕೆ ಮಾಡಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.


ಈ ವೇಳೆ ರಾಜು ದರ್ಗಶೆಟ್ಟಿ, ಮಹಾಂತೇಶ ಮಗದುಮ, ಅರೀಪ್ ಪೀರ್ಜಾದೆ, ರೆಹಮಾನ್ ಮೊಕಾಶಿ, ಆನಂದ ಕುಲಕರ್ಣಿ, ಬಿ.ಆರ್.‌ ಕಳಸಾ, ವಿನೋದ ಎಚ್‌,  ನಾಗೇಶ ಕೋಲಕಾರ,  ಶಿವಕುಮಾರ್  ಸೇರಿದಂತೆ ಇತರರು ಇದ್ದರು.








Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ