Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಳೇ ವಂಟಮೂರಿಯಲ್ಲಿ ಮತ ಚಲಾಯಿಸಿದ ಸಚಿವ ಸತೀಶ್ ಜಾರಕಿಹೊಳಿ


ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ಸಾಗಿದ್ದು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರ ರಾಹುಲ್‌ ಜಾರಕಿಹೊಳಿ ಅವರು ಮತಗಟ್ಟೆಯಿಂದ ಹೊರ ಬಂದ ಅವರು ಮತ ಹಾಕಿರುವ ಕುರುಹಾಗಿ ತಮ್ಮ ಬೆರಳಿಗೆ ಹಾಕಲಾಗಿರುವ ಶಾಹಿಯ ಗುರುತನ್ನು ತೋರಿಸಿ ಸಂತಸ ಪಟ್ಟರು.


ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಹಳೇ ವಂಟಮೂರಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 95 ರಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದರು.


 ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ ಅವರು, ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಪರ ಉತ್ತಮ ಅಲೆಯಿದೆ. ಕ್ಷೇತ್ರದಲ್ಲಿ ಜಯ ದಾಖಲಿಸುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದರು.


ನಮ್ಮ ಕ್ಷೇತ್ರದಲ್ಲಿ ಮೋದಿ ಅಲೆ ಇಲ್ಲ: ಕಾಂಗ್ರೆಸ್‌ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯುರಿವೆ. ಆದ್ದರಿಂದ ಈ ಬಾರಿ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಜಯಬೇರಿ ಭಾರಿಸುವುದರಲ್ಲಿ ಸಂಶಯವಿಲ್ಲ. ಮುಖ್ಯವಾಗಿ ಚಿಕ್ಕೋಡಿಯಲ್ಲಂತೂ ಮೋದಿ ಅಲೆ ಇಲ್ಲವೇ ಇಲ್ಲ. ಇಲ್ಲೆ ಏನೆ ಇದ್ದರೂ ಅಭ್ಯರ್ಥಿ  ಪರ ಸಾಮರ್ಥ,  ಅವರ ಕೆಲಸ ಹಾಗೂ ಪ್ಲಸ್‌ - ಮೈನಸ್‌  ಕ್ಯಾಲ್ಕೂಲೇಷನ್ ಆಗುತ್ತೆ ಹೊರತು ಇಲ್ಲಿ ಯಾವುದೇ ಮೋದಿ ಗಾಳಿ ಇಲ್ಲ ಎಂದರು.


ಇನ್ನು ಪ್ರಜ್ವಲ್ಲ್ ರೇವಣ್ಣ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜ್ವಲ್ಲ್ ರೇವಣ್ಣ ಪ್ರಕರಣ ಕೋರ್ಟ್ ನಲ್ಲಿದೆ. ಈಗಾಗಲೇ ಎಸ್ಐಟಿ ರಚಿಸಲಾಗಿದೆ. ಈ ಕೇಸ್ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಆದರೆ ಈಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹಸ್ತಕ್ಷೇಪ ಇಲ್ಲ. ಆರೋಪಿಸಿದರೆ ಸಾಲದು ಆರೋಪ ಸಾಬೀತಾಗಬೇಕೆಂದು ಪ್ರತಿಕ್ರಿಯಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ