Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಹೆಲಿಕಾಪ್ಟರ್​ ಖರೀದಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ:  ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌  ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್‌ ಅನ್ನು ಖರೀದಿಸಿದ್ದಾರೆ.

ಹೌದು.... ಇಂದು ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ನೂತನ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ  ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ ಪೇಸ್ ಬುಕ್‌ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.   ಸಚಿವ ಸತೀಶ್‌ ಜಾರಕಿಹೊಳಿ ಅವರು ಉತ್ತರಕರ್ನಾಟಕದಲ್ಲಿ ಸ್ವಂತ ಹೆಲಿಕಾಪ್ಟರ್‌ ಹೊಂದಿರುವ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಕೂಡಾ  ಪಾತ್ರರಾಗಿದ್ದಾರೆ.

ಇನ್ನು 2 ತಿಂಗಳುಗಳಲ್ಲಿ ಹಾರಾಡಲಿದೆ ಸಚಿವರ ಹೆಲಿಕಾಪ್ಟರ್‌:  ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಮ್ಮದೆಯಾದಂತಹ ಅಭಿಮಾನ ಬಳಗವನ್ನು ಕೂಡಾ ಹೊಂದಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರ ಅಪ್ಪಟ ಶಿಷ್ಯನಾಗಿದ್ದು, ರಾಜ್ಯದಲ್ಲಿ ಅಹಿಂದಾ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ದಿನದ 24 ಗಂಟೆಗಳಲ್ಲಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಿರುವ ಸಚಿವರು, ರಾಜ್ಯದ್ಯಂತ ಪಕ್ಷ ಸಂಘಟನೆ ಸೇರಿದಂತೆ  2028ರ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲು ಈ ನೂತನ ಹೆಲಿಕಾಪ್ಟರ್‌ ಅನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಈ ನೂತನ  ಹೆಲಿಕಾಪ್ಟರ್‌ ಪರಿಶೀಲಿಸುತ್ತಿರುವ ಸಚಿವರ ವಿಡಿಯೋಗಳು ಈಗ ಸಾಮಾಜೀಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ.

ಹೆಲಿಕಾಪ್ಟರ್​ನ ವಿಶೇಷತೆಗಳೇನು: ಎಲ್ಲಾ ಇತ್ತೀಚಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಅತ್ಯಾಧುನಿಕ  ಡಬಲ್‌ ಇಂಜಿನ್‌  ಹೊಂದಿರುವ ಹೆಲಿಕಾಪ್ಟರ್ ಇದಾಗಿದ್ದು,  ಐದು ಪ್ರಯಾಣಿಕರು ಮತ್ತು  ಇಬ್ಬರು ಪೈಲಟ್ ಅನ್ನು ಸಾಗಿಸುವ ವ್ಯವಸ್ಥೆ ಹೊಂದಿದೆ. ಈ ಹೆಲಿಕಾಪ್ಟರ್ ಎತ್ತರದಿಂದಲೂ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಸಾಮರ್ಥ್ಯವನ್ನು ಹೊಂದಿದೆ. ಚಾಪರ್ ಶಕ್ತಿ ಹೀರಿಕೊಳ್ಳುವ ಆಸನಗಳನ್ನು ಹೊಂದಿದೆ, ಇದು ಅಪಘಾತದ ಸಂದರ್ಭದಲ್ಲಿ ಅದರ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಇದಲ್ಲದೆ ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆಯನ್ನು ಸಹ ಹೊಂದಿದೆ.

ಇಂದು ನೂತನ ಹೆಲಿಕಾಪ್ಟರ್‌ ಪರಿಶೀಲಿಸಿದ ಸಚಿವರ ಜೊತೆ  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹುನಮಣ್ಣರ,  ಅಲಿ ಗೊರವನಕೋಲ್ ಸೇರಿದಂತೆ ಇತತರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ