Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಕಾಲುವೆಗಳ ನೀರಿನ ಹರಿವನ್ನು ವೀಕ್ಷಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ವಿವಿಧ ಕಾಲುವೆಗಳಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣವನ್ನು ಇಂದು ಖುದ್ದಾಗಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಪರಿಶೀಲನೆ ನಡೆಸಿ ಅಂತಿಮ ಹಂತದವರೆಗೆ ನೀರು ತಲುಪುವಂತೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ  ಸೂಚನೆ ನೀಡಿದರು.


 ನಂತರ  ಮೂಡಲಗಿ ತಾಲುಕಿನ ಕಲ್ಲೋಳಿ ಹಾಗೂ ನಾಗನೂರ ಪಟ್ಟಣದ ಹಳ್ಳ,  ಮುಗಳಖೋಡ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಾಲುವೆಗಳು ಹಾಗೂ ಬಾಗಲಕೋಟೆ ಜಿಲ್ಲೆಯ ಚುಮ್ಮಡ ಗ್ರಾಮದಲ್ಲಿ ಘಟಪ್ರಭಾ ಎಡದಂಡೆ ಕಾಲುವೆಗಳ ವೀಕ್ಷಣೆ ನಡೆಸಿದ ಸಚಿವರು, ನಂತರ ಮಹಾಲಿಂಗಪುರದಲ್ಲಿ ಎಲ್ಲಾ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ, ಕಾಲುವೆಯ ಅಂತಿಮ ಘಟ್ಟದವರೆಗೂ ನೀರು ತಲುಪುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಇದಕ್ಕೂ ಮೊದಲು  ಮುಗಳಖೋಡ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಾಲುವೆ ನೀರಿನ ಹರಿವನ್ನು ವೀಕ್ಷಿಸಿ, ಅಂತಿಮ ಹಂತದವರೆಗೆ ನೀರು ತಲುಪುವಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಮೂಡಲಗಿಯ ತಾಲೂಕಿನ ಕಲ್ಲೋಳಿ ಹಾಗೂ ನಾಗನೂರ ಪಟ್ಟಣದ ಹಳ್ಳದ ಪರಿಶೀಲನೆಯನ್ನು ನಡೆಸಿ, ಹೆಚ್ಚುವರಿ ನೀರು ಹರಿದು ಹೋಗುತ್ತಿದ್ದರಿಂದ ಕೆಇಬಿ ಅಧಿಕಾರಿಗಳಿಗೆ ಹಳ್ಳದ ಸುತ್ತಮುತ್ತಲಿನ ರೈತರ ಹೊಲಗಳಿಗೆ ಹೆಚ್ಚು ಸಮಯ ಕರೆಂಟ್ ನೀಡಲು ತಿಳಿಸಿದರು.



ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ: ಈಗಾಗಲೇ ಬಿಸಿಲಿನಿಂದ ಹಳ್ಳಗಳು ಹಾಗೂ ಕೊಳವೆ ಬಾವಿಗಳು ಬತ್ತುತ್ತಿರುವ ಹಿನ್ನೆಲೆಯಲ್ಲಿ, ಕಾಲುವೆ ನೀರು ಅಂತಿಮ ಹಂತದವರೆಗೆ ತಲುಪುವವರೆಗೆ ನೀರು ನಿರಂತರವಾಗಿ ಹರಿಯುವಂತೆ ಕ್ರಮ ಕೈಗಳ್ಳಬೇಕು. ಅಲ್ಲದೇ ಬಹುತೇಕ ಕಾಲುವೆಗಳಲ್ಲಿ ಹೂಳು ಮತ್ತು ಗಿಡಗಂಟಿ ಇರುವದರಿಂದ ನೀರು ಸರಾಗವಾಗಿ ಹರಿಯದ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲಾ ಕೆರೆಕಟ್ಟೆಗಳನ್ನು ತುಂಬಿಸುವ ಗುರುತರವಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ಆದ್ದರಿಂದ ತಾಂತ್ರಿಕ ಕಾರಣ ನೀಡದೆ ಎಲ್ಲಾ ಕಾಲುವೆಗಳಲ್ಲಿ ಬೆಳೆದಿರುವ ಗಿಡಗಂಟಿ ಸ್ವಚ್ಛಗೊಳಿಸಿ ಮತ್ತು ತುಂಬಿರುವ ಮಣ್ಣನ್ನು ತೆಗೆಸಿ ಸರಾಗವಾಗಿ ನೀರು ಹರಿಯಲು ಕ್ರಮ ವಹಿಸಬೇಕು. ಮುಖ್ಯವಾಗಿ ಈ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು ಎಂದು  ಅಧಿಕಾರಿಗಳಿಗೆ ಸಚಿವ ಸತೀಶ್‌ ಜಾರಕಿಹೊಳಿ  ಸೂಚನೆ ನೀಡಿದರು.


 ಇದೇ ವೇಳೆ ಮಾಜಿ ಶಾಸಕ ಶಾಮ್‌ ಘಾಟಗೆ, ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ