Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ

ಬೆಳಗಾವಿ ಸುವರ್ಣಸೌಧ ಡಿ.09 : ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಹತ್ತಿರದ ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರ್ಕಾರವು ಕ್ರಮವಹಿಸಲಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ ಅವರು ಹೇಳಿದರು.

ಪರಿಷತ್ತಿನಲ್ಲಿ ಡಿ.09 ರಂದು ಪರಿಷತ್ ಸದಸ್ಯರಾದ ಭೀಮರಾಯ ಬಸವರಾಜ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 299ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಈ ಕಾರ್ಖಾನೆಯ ಪುನಶ್ಚೇತನದ ಪ್ರಕ್ರಿಯೆಯು 2022ರಿಂದಲೇ ಆರಂಭವಾಗಿದೆ. 2022-23ನೇ ಹಂಗಾಮಿನಿಂದ 40 ವರ್ಷಗಳ ಅವಧಿಗೆ ಎಲ್.ಆರ್.ಓ.ಟಿ. ಆಧಾರದ ಮೇಲೆ ಇದ್ದಲ್ಲಿ, ಯಥಾಸ್ಥಿತಿಯಲ್ಲಿ ಖಾಸಗಿ ಅವರಿಗೆ ಗುತ್ತಿಗೆ ನೀಡಲು 2023ರಲ್ಲಿ ದಿನಪತ್ರಿಕೆಯಲ್ಲಿ ಟೆಂಡರ್ ಕರೆದರೂ ಸಹ ಬಿಡ್ಡುದಾರರು ಆಸಕ್ತಿ ತೋರಲಿಲ್ಲ. ಎರಡನೇ ಬಾರಿಗೆ ಟೆಂಡರ್ ಕರೆದರು ಸಹ ಯಾರೊಬ್ಬ ಬಿಡ್ಡುದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗಿಯಾಗಲಿಲ್ಲ.

ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಸ್ತಾವನೆಯನ್ನು ಒಳಗೊಂಡಂತೆ ಒಟ್ಟು 06 ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಎನ್.ಸಿ.ಡಿ.ಸಿ.ಯಿಂದ ನೆರವನ್ನು ಪಡೆಯುವ ಕುರಿತು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆಯನ್ನು ನಡೆಸಲಾಗುವುದು. ಎನ್.ಸಿ.ಡಿ.ಸಿ.ಯಿಂದ ಆರ್ಥಿಕ ನೆರವು ಲಭ್ಯವಾಗದಿದ್ದಲ್ಲಿ ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಎಲ್.ಆರ್.ಓ.ಟಿ. ಆಧಾರದ ಮೇಲೆ ಇದ್ದಲ್ಲಿ ಯಥಾಸ್ಥಿತಿಯಲ್ಲಿ ಖಾಸಗಿಯವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡಲು ಮತ್ತೊಮ್ಮೆ ಟೆಂಡರ್ ಪ್ರಕಟಣೆಯನ್ನು ಹೊರಡಿಸಲು ಪರಿಶೀಲಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇದು ಬೀದರ ಜಿಲ್ಲೆಯ ಮೊದಲ ಕಾರ್ಖಾನೆಯಾಗಿದೆ. 25 ಸಾವಿರ ರೈತರು ಷೇರು ಹೊಂದಿದ್ದಾರೆ. ಈ ಕಾರ್ಖಾನೆ ಮುಚ್ಚಿದರೆ ಬೀದರ ಭಾಗದ ರೈತರಿಗೆ ಅನ್ಯಾಯವಾಗಲಿದೆ. ದಯಮಾಡಿ ಯಾರಿಗಾದರು ಗುತ್ತಿಗೆ ನೀಡಿಯಾದರೂ ಕಾರ್ಖಾನೆಯನ್ನು ಆರಂಭಿಸಬೇಕು ಎಂದು ಪರಿಷತ್ ಶಾಸಕರಾದ ಭೀಮರಾವ್ ಪಾಟೀಲ ಅವರು ಸರ್ಕಾರಕ್ಕೆ ಒತ್ತಾಯ ಮಾಡಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*