Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಬ್ರಿಲಿಯಂಟ್ ಶಾಲೆಯ ಶೈಕ್ಷಣಿಕ ಪ್ರಗತಿ ಕಂಡು ಸಚಿವರ ಮೆಚ್ಚುಗೆ

ಬ್ರಿಲಿಯಂಟ್ ಶಾಲೆಗೆ ಸಚೀವ ಅಜಯ್ ಧರ್ಮಸಿಂಗ್ ಬೆಟ್ಟಿ



ತಾಳಿಕೋಟೆ,  ಪಟ್ಟಣದ ಮೈಲೇಶ್ವರ ಕ್ರಾಸ್‌ನಲ್ಲಿರುವ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಶಾಲೆಗೆ ರಾಜ್ಯದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಅಜಯ್ ಧರ್ಮಸಿಂಗ್ ಅವರು ಭೇಟಿ ನೀಡಿ, ಸಂಸ್ಥೆಯ ಶೈಕ್ಷಣಿಕ ಪ್ರಗತಿ ಹಾಗೂ ಸಾಧನೆಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
      ೨೦೦೫ರಲ್ಲಿ ನಮ್ಮ ತಂದೆ ಧರ್ಮಸಿಂಗ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಬದಲ್ಲಿ ಶಾಲೆಗೆ ತಾವು ಇನ್‌ಪೋಸಿಸ್ ವತಿಯಿಂದ ನೀಡಲಾದ ಕಂಪ್ಯೂಟರ್ ಸೌಲಭ್ಯವನ್ನು ಸ್ಮರಿಸಿಕೊಂಡ ಅವರು ಅಂದು ಆರಂಭವಾದ ಬ್ರಿಲಿಯಂಟ್ ಶಾಲೆ ಆರಂಭದಲ್ಲಿ ಕೇವಲ ೧೦೦ ವಿದ್ಯಾರ್ಥಿಗಳು ಹಾಗೂ ನಾಲ್ಕು ಕೇಂದ್ರಗಳೊಂದಿಗೆ ಶೈಕ್ಷಣಿಕ ಚಟುವಟಿಕೆ ಪ್ರಾರಂಭಿಸಿತ್ತು. ಆದರೆ ಇಂದು ಸಂಸ್ಥೆಯು ೧೫೦೦ ವಿದ್ಯಾರ್ಥಿಗಳು ಹಾಗೂ ೧೦೦ ಸಿಬ್ಬಂದಿ ವರ್ಗವನ್ನು ಹೊಂದುವ ಮೂಲಕ ಉತ್ತಮ ಬೆಳವಣಿಗೆ ಸಾಧಿಸಿರುವುದು ಸಂತಸದ ಸಂಗತಿ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
         ಸಂಸ್ಥೆಯ ಆಡಳಿತ ಮಂಡಳಿಯ ಪರಿಶ್ರಮ ಮತ್ತು ದೂರದೃಷ್ಟಿಯಿಂದ ಬ್ರಿಲಿಯಂಟ್ ಶಾಲೆ ರಾಜ್ಯದಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಷಯ. ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆದು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಿ ಎಂದು ಶುಭ ಹಾರೈಸಿದರು. ಕಳೆದ ವರ್ಷ ಶಾಲೆಯ ವಿದ್ಯಾರ್ಥಿಯೊಬ್ಬರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕಗಳನ್ನು ಗಳಿಸಿ ಪತ್ರಿಕೆಗಳಲ್ಲಿ ಸುದ್ದಿಯಾಗಿದ್ದನ್ನು ಸ್ಮರಿಸಿದ ಸಚಿವರು, ಈ ಬಾರಿಯೂ ಕನಿಷ್ಠ ಐವರು ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಪಡೆಯುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವೆಂದು ಸಂಸ್ಥೆಯ ಆಡಳಿತ ಮಂಡಳಿ ಹೇಳುತ್ತಿರುವದು ಹೆಮ್ಮೆಯ ಸಂಗತಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವಂತೆ ಪ್ರೇರೇಪಿಸಿದರು. ವಿದ್ಯಾರ್ಥಿಗಳಿಗೆ ಮತ್ತು ಸಂಸ್ಥೆಗೆ ತಮ್ಮಿಂದ ಯಾವುದೇ ರೀತಿಯ ಸಹಾಯ ಸಹಕಾರ ಬೇಕಾದರೂ ಮಾಡಲು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದರು.
      ಇದೇ ಸಮಯದಲ್ಲಿ ಸಚೀವರಾದ ಅಜಯ್ ಧರ್ಮಸಿಂಗ್ ಅವರನ್ನು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಸನ್ಮಾನಿಸಿ ಗೌರವಿಸಿದರು.
      ಈ ಸಂದರ್ಭದಲ್ಲಿ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾನಾಗೌಡ ಬಿ. ನಡುವಿನಮನಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಮಡಿವಾಳರ, ಉಪಾಧ್ಯಕ್ಷ ರಾಜಶೇಖರ ನಡುವಿನಮನಿ, ನಿರ್ದೇಶಕರಾದ ಎಸ್.ಎಚ್. ಪಾಟೀಲ, ಶ್ರೀಮತಿ ಎಲ್.ಎಂ. ಬಿರಾದಾರ, ಎನ್.ಎಸ್. ಗಡಗಿ, ಡಾ. ಶಶಿಕುಮಾರ ಎನ್. ಬಿರಾದಾರ, ಮುಖ್ಯಗುರುಗಳು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಪಾಲಕ-ಪೋಷಕರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರಿಲಿಯಂಟ್ ಶಾಲೆಯ ಶೈಕ್ಷಣಿಕ ಪ್ರಗತಿ ಕಂಡು ಸಚಿವರ ಮೆಚ್ಚುಗೆ   ಕುಲಗೋಡ ಪಿ.ಕೆ.ಪಿ.ಎಸ್  ನೂತನ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆಕಾಗವಾಡ ಪಟ್ಟಣ ಪಂಚಾಯತಿಯಲ್ಲಿ ಸಿಬ್ಬಂದಿ ಕೊರತೆ..! ಸಾರ್ವಜನಿಕರ ಕೆಲಸಗಳಿಗೆ ಹಿನ್ನಡೆ..!ನೇಬಗೇರಿಯಲ್ಲಿ ತಂಗಡಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿನ.22 ರಂದು ರಾಮದುರ್ಗದಲ್ಲಿ ತಾಲೂಕಾ ಗಾಣಿಗ ಸಂಘ ಉದ್ಘಾಟನೆ, ಪ್ರತಿಭಾ ಪುರಸ್ಕಾರಕಾಗವಾಡ ಚನ್ನಮ್ಮ ಸರ್ಕಲ್‌ನಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸರಳ ಆಚರಣೆ*ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೂಲಸೌಕರ್ಯ ಕಲ್ಪಿಸಲು ಗ್ರಾಮಸ್ಥರ ಆಗ್ರಹ* ಶರಣ ಸಂಸ್ಕೃತಿಯ ಸಾಕಾರ ಮೂರ್ತಿ ಗಂಗಾಧರ ಕೋಟಗಿ ಅವರಿಗೆ ಕಿತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗೌರವಕೋಳೂರು ಕ್ಷೇತ್ರದ ಸಮಗ್ರ  ಅಭಿವೃದ್ಧಿಗಾಗಿ  ಜಿಪಂ ಚುನಾವಣೆಗೆ ಸ್ಪರ್ಧೆ :  ದೊಡ್ಡ ಕೇಶವ ರೆಡ್ಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್