Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಶಾಲೆ ಭೇಟಿ; ಸಮಸ್ಯೆಗಳ ಪರಿಶೀಲನೆ


ಬಳ್ಳಾರಿ,ಜೂ.01 : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹಮದ್ ಅವರು ಮಂಗಳವಾರ ನಗರದ ಎಪಿಎಂಸಿ ಈದ್ಗಾ ಸಮೀಪದ ಸರ್ಕಾರಿ ಹಿರಿಯ ಉರ್ದು ಪ್ರೌಢಶಾಲೆ ಹಾಗೂ ಕೌಲ್ ಬಜಾರ್ ತರಬೇತಿ ಶಾಲೆಗೆ ಭೇಟಿ ನೀಡಿ ಶಾಲಾ ಕಟ್ಟಡ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಭೇಟಿ ವೇಳೆ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಯಿAದ ಶಾಲೆಯಲ್ಲಿರುವ ವಿವಿಧ ಸಮಸ್ಯೆಗಳು, ಮೂಲಸೌಕರ್ಯದ ಕೊರತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಆಲಿಸಿದರು.
ಶಾಲೆಯ ತರಗತಿ ಕೊಠಡಿಗಳು, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳು ಮತ್ತು ಗ್ರಂಥಾಲಯವನ್ನು ಖುದ್ದಾಗಿ ವೀಕ್ಷಿಸಿದ ಅಧ್ಯಕ್ಷರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಶಿಕ್ಷಕರಿಗೆ ಸೂಚಿಸಿದರು.
ಕಟ್ಟಡದ ಸ್ಥಿತಿಗತಿ, ತರಗತಿ ಕೊಠಡಿಗಳು ಹಾಗೂ ಶಾಲಾ ಪರಿಸರವನ್ನು ಪರಿಶೀಲಿಸಿದ ಅವರು, ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಶಾಲೆಯಲ್ಲಿ ಕಂಡುಬAದಿರುವ ಕೊಠಡಿಗಳ ಕೊರತೆ ಮತ್ತು ಸ್ವಚ್ಛತೆಯ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು. ಈ ಕುರಿತು ಸಂಬAಧಪಟ್ಟ ಅಧಿಕಾರಿಗಳಿಗೆ ಹಾಗೂ ಶಿಕ್ಷಣ ಇಲಾಖೆಗೆ ಶೀಘ್ರದಲ್ಲೇ ವರದಿ ಸಲ್ಲಿಸಿ, ಅಗತ್ಯ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಸಮುದಾಯದ ರಾಜ್ಯಾಧ್ಯಕ್ಷ ದಾದಾ ಭಾಯ್, ಜಿಲ್ಲಾಧ್ಯಕ್ಷ ಡಿ.ಅಯಾಜ್, ಬುಡಾ ಮಾಜಿ ಅಧ್ಯಕ್ಷ ಮೋಹಿನ್ ಖಾನ್, ಕ್ರಿಶ್ಚಿಯನ್ ಸಮುದಾಯದ ಮುಖ್ಯಸ್ಥ ಜಾಶ್ವಾ, ಮುಖಂಡ ಕಣೇಕಲ್ ಮಾಬುಸಾಬ್, ಆಯೋಗದ ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರಿ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಅಧಿಕಾರಿ ರಾಜು ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ