Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಮೂಡಲಗಿ: ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಬರುವ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರದಂದು ಹೊರವಲಯದ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆಯೂ ಅವರು ಸೂಚಿಸಿದರು. ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್ ಇಲ್ಲವೇ ಜನವರಿ ತಿಂಗಳಲ್ಲಿ ಚುನಾವಣೆಯು ಘೋ?ಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಬೇಗನೇ ಮುಗಿಸಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಸ್ಥಾನಿಕವಾಗಿ ಜನರ ಮೂಲಭೂತ ಸೌಕರ್ಯಗಳನ್ನು ನೀಗಿಸಲು ಮುಂದಾಗುವಂತೆ ಸೂಚಿಸಿದ ಅವರು, ಜನರಿಗೆ ತೊಂದರೆಯಾಗದಂತೆ ಕೆಲಸವನ್ನು ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅರಭಾವಿ ಕ್ಷೇತ್ರದ ಸುಮಾರು ೨೦ ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆ ಯೋಜನೆಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಇದಕ್ಕಾಗಿ ನೀರಾವರಿ ಇಲಾಖೆಯಿಂದ ಮೊದಲ ಹಂತದ ಕಾಮಗಾರಿಗಾಗಿ ಸುಮಾರು ೧೯೨.೩೦ ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಪ್ರಸ್ತುತ ೭ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯು ಪ್ರಗತಿಯಲ್ಲಿದೆ. ಎರಡನೇ ಹಂತದ ೧೩ ಕೆರೆಗಳನ್ನು ತುಂಬಿಸಲಿಕ್ಕೆ ೧೩೧.೫೭ ಕೋಟಿ ರೂಪಾಯಿ ಅನುದಾನವು ಬರಬೇಕಿದೆ. ಮುಂದಿನ ೨೦೨೬ ನೇ ಸಾಲಿನಲ್ಲಿ ಮೊದಲ ಹಂತದ ಕಾಮಗಾರಿಗಳು ಮುಗಿಯಲಿದ್ದು, ಎರಡನೇ ಹಂತದ ಕಾಮಗಾರಿಗಳು ಮುಗಿಯಲಿಕ್ಕೆ ಎರಡು ವ?ಗಳು ಬೇಕಾಗಬಹುದು. ಈಗೀರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ರೈತ ಕುಟುಂಬಗಳಿಗೆ ಅನುಕೂಲ ಮಾಡಿಕೊಡುವಂತೆ ಸೂಚಿಸಿದರು.
ಆರ್ಡಿಪಿಆರ್ ಇಲಾಖೆಯ ಅನುದಾನದಡಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಾಗಿ ಒಟ್ಟು ೪೭೫ ಕೋಟಿ ರೂಪಾಯಿ ಬಿಡುಗಡೆಗೊಂಡಿದ್ದು, ೩೮೮ ಕೋಟಿ ರೂಪಾಯಿ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಇದರಿಂದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ಸುಮಾರು ೧೪೮ ಜನ ವಸತಿಗಳಿಗೆ ಅನುಕೂಲವಾಗಲಿದೆ.ಇದನ್ನು ಸಹ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಸ್ತೆಗಳ ಅಭಿವೃದ್ಧಿಗಾಗಿ ಈಗಾಗಲೇ ಲೋಕೋಪಯೋಗಿ ಇಲಾಖೆಯಿಂದ ೩೦ ಕೋಟಿ ರೂಪಾಯಿ ಅನುದಾನ ಬಂದಿದ್ದು, ಇನ್ನೂ ೨೦ಕೋಟಿ ರೂಪಾಯಿ ಅನುದಾನ ಬರಬೇಕಿದೆ. ಈ ಅನುದಾನವು ಬೇಗನೇ ಬಿಡುಗಡೆಯಾದರೆ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಮೇಲಾಧಿಕಾರಿಗಳಿಗೆ ಅಗತ್ಯವಿರುವ ಅನುದಾನದ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದರು. ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕಚೇರಿಗಳ ಅಲೆದಾಟವನ್ನು ತಪ್ಪಿಸಲು ಆದ? ಸ್ಥಾನಿಕವಾಗಿ ಅವರ ಕೆಲಸಗಳನ್ನು ಮಾಡಿಕೊಡುವಂತೆ ಸೂಚಿಸಿದ ಅವರು, ರೈತಾಪಿ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಸರ್ಕಾರಿ ಸೌಲಭ್ಯಗಳನ್ನು ದೊರಕಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ ಮತ್ತು ತೋಟಗಾರಿಕೆಯಿಂದ ರೈತರು ತೊಂದರೆಗಳನ್ನು ಅನುಭವಿಸಬಾರದು. ರೈತರಿಗೆ ತೊಂದರೆಗಳು ಆದರೆ ನಾನು ಸಹಿಸುವುದಿಲ್ಲ. ಅಧಿಕಾರಿಗಳೇನೂ ಮೇಲಿನಿಂದ ಬಿದ್ದಿಲ್ಲವೆಂದು ಅವರು ಖಡಕ್ ವಾನಿಂಗ್ ಮಾಡಿದರು.ಇದೇ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.ಮೂಡಲಗಿ ತಹಶೀಲ್ದಾರ ಶ್ರೀಶೈಲ ಗುಡುಮೆ, ಗೋಕಾಕ ತಹಶಿಲ್ದಾರ ಡಾ. ಮೋಹನ ಭಸ್ಮೆ, ಮೂಡಲಗಿ ತಾ.ಪಂ. ಇಓ ಫಕೀರಪ್ಪ ಚಿನ್ನನ್ನವರ, ಗೋಕಾಕ ತಾ.ಪಂ. ಇಓ ಪರಶುರಾಮ ಗಸ್ತೆ, ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ