LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಬರ ಘೋಷಣೆಗೆ ಸಿಎಂಗೆ ಒತ್ತಡ ತರುವುದಾಗಿ ಶಾಸಕ ನಾಡಗೌಡ ಭರವಸೆ

ರೈತ ಸಂಘದ ನೇತೃತ್ವದಲ್ಲಿ ನಡೆದ ೬ನೇ ದಿನದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಬೆಟ್ಟಿ


ತಾಳಿಕೋಟೆ,  ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟೆ ಹಾಗೂ ದೇವರಹಿಪ್ಪರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ವಿರೋಧಿಸಿ ಸಂಪೂರ್ಣ ಬರಪೀಡಿತ ಜಿಲ್ಲೆ ಘೊಷಿಸಬೇಕೆಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಅವರು, ಬೆಟ್ಟಿ ನೀಡಿ ಸರ್ಕಾರದ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುದವರ ಜೊತೆಗೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುವದಾಗಿ ಬರವಸೆ ನೀಡಿದರು.
      "ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಜಿಲ್ಲೆಯ ನಿಡಗುಂದಿ, ಕೊಲ್ಲಾರ ಹಾಗೂ ವಿಜಯಪುರ ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿತ್ತು. ಎರಡನೇ ಪಟ್ಟಿಯಲ್ಲಾದರೂ ಮುದ್ದೇಬಿಹಾಳ, ತಾಳಿಕೋಟಿ ಮತ್ತು ದೇವರಹಿಪ್ಪರಗಿ ತಾಲೂಕುಗಳು ಸೇರ್ಪಡೆಯಾಗಲಿವೆ ಎಂಬ ಬಲವಾದ ನಂಬಿಕೆ ಇತ್ತು. ಆದರೆ ಈ ಹಂತದಲ್ಲೂ ಇವುಗಳನ್ನು ಕೈಬಿಟ್ಟಿರುವುದು ನನಗೂ ನೋವು ತಂದಿದೆ. ವಿಜಯಪುರ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ರೈತರ ಸಂಕಷ್ಟದ ಕುರಿತು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಮತ್ತೆ ಮನವಿ ಮಾಡಲಾಗುವುದು. ರೈತರ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ, ರೈತರ ಹಿತಕ್ಕೆ ನಾನು ಸದಾ ಬದ್ಧ" ಎಂದು ಭರವಸೆ ನೀಡಿ, ರೈತರು ತಾಳ್ಮೆ ಕಳೆದುಕೊಳ್ಳದಂತೆ ಮನವಿ ಮಾಡಿದರು.
  ಸರ್ಕಾರದ ವಿರುದ್ಧ ಮುಖಂಡರ ಆಕ್ರೋಶ:
     ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, "ರಾಜ್ಯಾದ್ಯಂತ ಭೀಕರ ಅಭಾವ ಪರಿಸ್ಥಿತಿ ಇದ್ದರೂ ಸರ್ಕಾರ ಸಮೀಕ್ಷೆಯ ನೆಪ ಹೇಳಿ ವಿಳಂಬ ನೀತಿ ಅನುಸರಿಸುತ್ತಿದೆ. ’ಅಂಗೈಯಲ್ಲಿ ಹುಣ್ಣಿದ್ದರೂ ಕನ್ನಡಿ ನೋಡುವ’ ಕೆಲಸವನ್ನು ಸರ್ಕಾರ ಮಾಡುತ್ತಿದೆ. ತಕ್ಷಣವೇ ಉಳಿದ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಪರಿಹಾರ ನೀಡದಿದ್ದರೆ ಹಂತ-ಹಂತವಾಗಿ ಎಲ್ಲಾ ತಾಲೂಕುಗಳಲ್ಲಿ ಬಂದ್ ಕರೆ ನೀಡಿ ಉಗ್ರ ಹೋರಾಟ ರೂಪಿಸಲಾಗುವುದು" ಎಂದು ಎಚ್ಚರಿಸಿದರು.
    ಧರಣಿಯನ್ನು ಉದ್ದೇಶಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠ್ಠಲ ಬಿರಾದಾರ ಮಾತನಾಡಿದರು. 
        ೬ನೇ ದಿನದ ಧರಣಿಯಲ್ಲಿ ತಾಲೂಕಾಧ್ಯಕ್ಷ ಬಾಲಪ್ಪಗೌಡ ಲಿಂಗದಹಳ್ಳಿ, ರಾಮನಗೌಡ ಹಾದಿಮನಿ, ಅಶೋಕ ಉಪ್ಪಲದಿನ್ನಿ, ಚಿದಾನಂದ ಬಡಿಗೇರ, ಮಂಜುನಾಥ ಬಡಿಗೇರ, ಪ್ರಕಾಶ್ ಬಡಿಗೇರ, ರಮೇಶ್ ಬಡಿಗೇರ, ಮಲ್ಲನಗೌಡ ಆಲರೆಡ್ಡಿ, ಸಂಗನಗೌಡ ಟಕ್ಕಳಕಿ, ಗೋಪಾಲ್ ನಾಯ್ಕೋಡಿ, ಸುಭಾಶ್ ಗುಂಡಗಿ, ಶಿವನಗೌಡ ಬಿರಾದಾರ ಹಾಗೂ ರೈತ ಮಹಿಳೆಯರಾದ ಕಸ್ತೂರಿ ಮುದ್ದನ್ನೂರ, ಬೇಬಿ ಮುದ್ದನ್ನೂರ, ಶಾಂತಮ್ಮ ಯಾಳವಾರ, ಸಂಗಮ್ಮ ಟಕ್ಕಳಕಿ, ಪುಷ್ಪ ಬಿರಾದಾರ, ಜಯಶ್ರೀ ಪಾಟೀಲ, ಶಂಕ್ರಮ್ಮ ಉಪ್ಪಲದಿನ್ನಿ, ಕಮಲಾಕ್ಷಿ ಬಿರಾದಾರ, ಸಂಗಮ್ಮ ನಾವಿ ಸೇರಿದಂತೆ ಹಲವರು ಭಾಗವಹಿಸಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್