ಬಳ್ಳಾರಿ, ಅ.31: ಗಡಿಗಿ ಚೆನ್ನಪ್ಪ ವೃತ್ತದಿಂದ ಈಡಿಗ ಹಾಸ್ಟೇಲ್'ವರೆಗಿನ ರಸ್ತೆ ಅಭಿವೃದ್ಧಿ ವೇಳೆ ಇಲ್ಲಿನ ಬೀದಿ ಬದಿ ವ್ಯಾಪಾರಸ್ಥರಿಗೆ ತಳ್ಳು ಗಾಡಿ ವಿತರಿಸುವುದಾಗಿ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ 9 ಜನ ವ್ಯಾಪಾರಸ್ಥರಿಗೆ ಟಚ್ ಫಾರ್ ಲೈಫ್ ಫೌಂಡೇಶನ್ ವತಿಯಿಂದ ಉಚಿತವಾಗಿ ತಳ್ಳು ಗಾಡಿ ನೀಡಿರುವೆ ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.
ಬಳ್ಳಾರಿಯ ಗಡಿಗಿ ಚೆನ್ನಪ್ಪ ವೃತ್ತದ ಬಳಿ ಶುಕ್ರವಾರ ಬೆಳಿಗ್ಗೆ ಗಾಡಿಗಳನ್ನು ವಿತರಿಸಿ ಅವರು ಮಾತನಾಡಿದರು.
ಈ ಸಂದರ್ಭ ಹಾಜರಿದ್ದ ಪಾಲಿಕೆಯ ಸದಸ್ಯ ನೂರ್ ಮೊಹಮ್ಮದ್ ಮಾತನಾಡಿ; ಭಾಡಿಗೆ ಕೊಟ್ಟು ತಳ್ಳು ಗಾಡಿ ತರುತ್ತಿದ್ದ ಬಡ ಬೀದಿ ಬದಿ ವ್ಯಾಪಾರಸ್ಥರಿಗೆ ತೊಂದರೆ ಇತ್ತು, ಇದನ್ನು ಅರಿತು ಶಾಸಕರು ಬೀದಿ ಬದಿ ವ್ಯಾಪಾರಸ್ಥರಿಗೆ ತಳ್ಳುಗಾಡಿಗಳನ್ನು ಉಚಿತವಾಗಿ ನೀಡಿರುವುದು ಅಭಿನಂದನಾರ್ಹ ಎಂದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಬಿಆರೆಲ್ ಸೀನಾ, ಪೋಲಕ್ ರೆಡ್ಡಿ ಹಾಜರಿದ್ದರು.