LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಶ್ರೀ ಖಾಸ್ಗತೇಶ್ವರ ಮಠಕ್ಕೆ ಶಾಸಕ ಶರಣಗೌಡ ಕಂದಕೂರ ಭೇಟಿ

-

ತಾಳಿಕೋಟೆ,  ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರು ಗುರುವಾರರಂದು ಶ್ರೀ ಖಾಸ್ಗತೇಶ್ವರ ಮಠಕ್ಕೆ ಭೆಟ್ಟಿ ನೀಡಿ ಶ್ರೀ ಮಠದ ಪೀಠಾಧಿಪತಿ ಬಾಲಶಿವಯೋಗಿ ಶ್ರೀ ಸಿದ್ದಲಿಂಗದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.
    ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಂದಕೂರ ಅವರು ಶ್ರೀ ಸಿದ್ದಲಿಂಗದೇವರು ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. 
  ತಾವು ಚಿಕ್ಕವಯಸ್ಸಿನಲ್ಲಿಯೇ ಇದ್ದರು ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಸರಳತೆ ಸೌಜನ್ಯ ಹಾಗೂ ಅಹಂಕಾರ ರಹಿತ ಸ್ವಭಾವದಿಂದ ಜನರ ವಿಶ್ವಾಸನ್ನು ಗಳಿಸಿಕೊಂಡಿದ್ದಾರೆಂದು ಹೇಳಿದರು. 
    ವಿಶೇಷವಾಗಿ ಗ್ರಾಮೀಣಮಟ್ಟದಲ್ಲಿ ನಡೆಯುತ್ತಿರುವ ವ್ಯಸನಮುಕ್ತ ಕಾರ್ಯಕ್ರಮಗಳು ಹಾಗೂ ಪ್ರವಚನ ಮೂಲಕ ಸನ್ಮಾರ್ಗಕ್ಕೆ ಕೊಂಡೊಯ್ಯುವಂತಹ ಕಾರ್ಯಕ್ರಮಗಳ ಕುರಿತು ಶ್ಲ್ಯಾಘಿಸಿದ ಶಾಸಕರು ಇಂತಹ ಅಭಿಯಾನದಿಂದ ಅನೇಕ ಜನರು ದುಚ್ಚಟಗಳಿಂದ ದೂರವಾಗಿ ತಮ್ಮ ತಮ್ಮ ಉತ್ತಮ ಜೀವನ ನಡೆಸುತ್ತಾ ಸಾಗಿದ್ದಾರೆ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ರಾಜ್ಯದಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಚಾರಗೊಳ್ಳಬೇಕಾಗಿದೆ ಎಂದು ಆಶಿಸಿದರಲ್ಲದೇ ನಮ್ಮ ಮೇಲೆ ಶ್ರೀ ಮಠದ ತಮ್ಮ ಆಶೀರ್ವಾದ ಸದಾ ಇರಲಿ ಎಂದರು.
    ನಂತರ ಶ್ರೀ ಖಾಸ್ಗತೇಶ್ವರ ಮಠದ ಸಿದ್ದಲಿಂಗದೇವರು ಮಾತನಾಡಿ ಶಾಸಕ ಶರಣಗೌಡ ಕುಂದಕೂರ ಅವರು ಉತ್ತಮ ನೀತಿ ನಡವಳಿಕೆ ಸರಳತೆಯ ಸ್ವಭಾವದೊಂದಿಗೆ ಜನತೆಯೊಂದಿಗೆ ಬೆರೆಯುವಂತಹ ಗುಣವೇ ಅವರನ್ನು ಉನ್ನತಮಟ್ಟಕ್ಕೆ ಕೊಂಡ್ಯೊಯ್ದಿದೆ ಎಂದು ಅಭಿಪ್ರಾಯಪಟ್ಟ ಶ್ರೀಗಳು ಕೂಡಲೇ ಶಾಸಕ ಶರಣಗೌಡ ಅವರಿಗೆ ಶ್ರೀ ಮಠದ ವತಿಯಿಂದ ಗೌರವಿಸಿದರು. ಪ್ರತಿಯಾಗಿ ಶಾಸಕರು ಶ್ರೀ ಸಿದ್ದಲಿಂಗದೇವರಿಗೆ ಸನ್ಮಾನಿಸಿ ಗೌರವಿಸಿದರು. ಶಾಸಕರ ಹಾಗೂ ಶ್ರೀಗಳ ಭೇಟಿಯು ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಿಗೆ ಮತ್ತಷ್ಟು ಉತ್ತೇಜನ ನೀಡುವಂತಾಯಿತು.
    ಈ ಸಮಯದಲ್ಲಿ ಯಾದಗಿರಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಸ ವಣಗೇರಾ, ಹಾಗೂ ವಿಜಯಪುರ ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಬಸನಗೌಡ ಮಾಡಗಿ, ಮಲ್ಲಿಕಾರ್ಜುನ ಅರುಣಿ, ಮಲ್ಲನಗೌಡ ಹೊಸಳ್ಳಿ, ನಿಂಗನಗೌಡ ಬಿರಾದಾರ, ಅಮರಯ್ಯಸ್ವಾಮಿ ಜಾಲಿಬೆಂಚಿ, ರಾಮನಗೌಡ ಕೆಸರಟ್ಟಿ, ನರಸಿಂಹರೆಡ್ಡಿ, ಶರಣು ಯಡಹಳ್ಳಿ ಮೊದಲಾದವರು ಉಪಸ್ತಿತರಿದ್ದರು. 
  

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ