Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಬೆಂಗಳೂರು, ನವೆಂಬರ್ 5: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲವು ಕಡೆ ಒಣ ಹವೆಯಿರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಲಘು ಮಳೆಯ ಸಾಧ್ಯತೆ ಇದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಹಾವೇರಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಗಾಳಿಯ ವೇಗ ಗಂಟೆಗೆ 11 ಕಿ.ಮೀ. ಇರಲಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ