Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿಯವರು ಭಾರತ ಅಷ್ಟೇ ಅಲ್ಲದೆ ವಿಶ್ವದನಾಯಕ: ರಮೇಶ ಜಾರಕಿಹೊಳಿ

ಬೆಳಗಾವಿ30: ನರೇಂದ್ರ ಮೋದಿಯವರು ಪ್ರಧಾನಿ‌ ಆದ ನಂತರ ನಮಗೆ ಹೆಮ್ಮೆ ಅನಿಸುತ್ತದೆ. ಈ ಹಿಂದೆ ಬಹಳಷ್ಟು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾಗಾಂಧಿ ನಂತರ ಗಟ್ಟಿಯಾದ ಪ್ರಧಾನಿ ಅಂದರೆ ಅದು ನರೇಂದ್ರ ಮೋದಿಯವರು.  ಪ್ರಧಾನಿ ನರೇಂದ್ರ ಮೋದಿಯವರು ಭಾರತದ ನಾಯಕರು ಅಷ್ಟೇ ಅಲ್ಲ ವಿಶ್ವಾನಾಯಕರಾಗಿ ಬೆಳೆದು ನಿಂತಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ಅವರು ತಿಳಿಸಿದ್ದಾರೆ.


ಸೋಮಾವಾರ ರಾತ್ರಿ ಗೋಕಾಕ್ ಪಟ್ಟಣದಲ್ಲಿ  ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪರವಾಗಿ ಆಯೋಜನೆ ಮಾಡಲಾಗಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆ ಭಾರತದ ಭದ್ರತೆ , ಆರ್ಥಿಕ ಭದ್ರತೆಗಾಗಿ ನಡೆಯುವ ಚುನಾವಣೆ ಆಗಿದೆ. ಕಳೆದ 10  ವರ್ಷದಿಂದ ನರೇಂದ್ರ ಮೋದಿಯವರು ಉತ್ತಮ ಆಡಳಿತ ನೀಡಿದ್ದಾರೆ.‌ ಭಾರತಕ್ಕಾಗಿ ಹಗಲಿರಳು ದುಡಿಯುವ ನಾಯಕ ಅಂದರೆ ಅದು ನರೇಂದ್ರ ಮೋದಿಯವರು.


ತಮ್ಮ ತಾಯಿ ನಿಧನರಾದ ನಂತರವೂ ಒಂದೆ ಒಂದು ದಿನ ರಜೆ ತಗೆದುಕೊಳ್ಳದೆ, ತಾಯಿಯ ಅಂತಮ ಸಂಸ್ಕಾರ ಮಾಡಿ, ಅಂದೆ ಪಶ್ಚಿಮ ಬಂಗಾಳದಲ್ಲಿ ಕಾರ್ಯಕ್ರಮದಲ್ಲಿ ಭಾಗಿ ಆದರು.‌ ಅಂತಹ ಆದರ್ಶ ವ್ಯಕ್ತಿ ನಮ್ಮ ಪ್ರಧಾನಿ ಆಗಿದ್ದಾರೆ ಎಂದರೆ ನಾವು ಹೆಮ್ಮೆ ಪಡಬೇಕು. ಒಬ್ಬ ಸಾಮಾನ್ಯ ವ್ಯಕ್ತಿ ಪ್ರಧಾನಿ ಆಗಿದ್ದಾರೆ ಎಂದರೆ ಅವರು ದೇವತಾ ಮನುಷ್ಯ. ಸತತ 13 ದಿನಗಳ ಕಾಲ ಉಪಾವಸ ವೃತ ಮಾಡಿ, ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿ ಆದರು‌‌.‌ ನರೇಂದ್ರ ಮೋದಿಯವರು ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ರಾಮ ಸೇತುವೆಗೆ ಹೊಗಿ ಪೂಜೆ ಸಲ್ಲಿಸಿದರು.  ತಮ್ಮ ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ರಾಮ ಮಂದಿರಕ್ಕೆ ಹೊಗುವದನ್ನು ಬಹಿಷ್ಕಾರ ಮಾಡಿದರು ಎಂದು ರಮೇಶ್ ಜಾರಕಿಹೊಳಿ ಅವರು ತಿಳಿಸಿದರು.


ಈ ವೇಳೆ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಮಾಜಿ ಶಾಸಕ ಎಂ ಎಲ್ ಮುತ್ತೇಣ್ಣವರ, ಬಿಜೆಪಿ ಗ್ರಾಮೀಣ ಜಿಲ್ಲಾದ್ಯಕ್ಷ ಶುಭಾಸ ಪಾಟೀಲ್ ಅಶೋಕ ಪಾಟೀಲ್, ರಾಮದುರ್ಗ ಬಿಜೆಪಿ,  ಮುಖಂಡ ಚಿಕ್ಕರೇವಣ್ಣ, ಕೆ ವಿ ಪಾಟೀಲ್, ನಗರ ಮಂಡಳ ಅಧ್ಯಕ್ಷ ಭೀಮಶಿ ಭರಮಣ್ಣವರ, ದಯಾನಂದ ಮುನ್ನವಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ