ತಾಳಿಕೋಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಸರ್ಕಾರ ನೀಡುವ ೨೦೨೩-೨೪ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿಗೆ ಕೊಪ್ಪಳ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಯ ತಾಳಿಕೋಟೆಯ ಶ್ರೀ ಖಾಸ್ಗತೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ ಕು. ಮಹಮ್ಮದ್ ಪಟೇಲ್ ಅವರು ಭಾಜನರಾಗಿದ್ದಾರೆ.
ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ಮೂಲಕ ಸಮುದಾಯ ಸೇವಾ ಕಾರ್ಯಗಳು, ಸೇವಾ ಚಟುವಟಿಕೆಗಳು ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಲಭಿಸಿರುವುದು ತಾಲ್ಲೂಕಿಗೆ ಹೆಮ್ಮೆಯ ವಿಷಯವಾಗಿದೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರಾದ ಡಾ. ದಯಾನಂದ ಬಿ. ಮುಗಡ್ಲಿಮಠ, ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿಯಾದ ಡಾ. ಕನಕಪ್ಪ ಪೂಜಾರಿ, ತಾಲ್ಲೂಕು ಸಂಯೋಜನಾಧಿಕಾರಿಗಳಾದ ರಾಜು ಕಪಾಲಿ ಮತ್ತು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಕೆ.ಬಿ. ದೇಸಾಯಿ ಹಾಗೂ ಶ್ರೀಮತಿ ಲಲಿತಾ ಎಸ್. ಗೇದರ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.