LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮಾಂಕ್ ದಿ ಯಂಗ್ ಕುತೂಹಲದ ಟ್ರೇಲರ್ 







     ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ 'ಮಾಂಕ್ ದಿ ಯಂಗ್' ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು.

    ನಟ ಕೃಷ್ಣ ಅಜಯ್ ರಾವ್, ನಿರ್ದೇಶಕ ಸಿಂಪಲ್ ಸುನಿ, ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು, ನಟ ಬಬ್ಲು ಪೃಥ್ವಿರಾಜ್‌, ನಟ ನಿಶ್ಚಿತ್ ಸೇರಿದಂತೆ ಮುಂತಾದವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.


     "ಟ್ರೇಲರ್ ನೋಡಿದಾಗ ಹೊಸತಂಡದ ಚಿತ್ರ ಎಂದು ಹೇಳಲಾಗುವುದಿಲ್ಲ. ಅಷ್ಟು ಚೆನ್ನಾಗಿದೆ. ಚಿತ್ರ ಕೂಡ ಉತ್ತಮವಾಗಿ ಬಂದಿರುತ್ತದೆ ಎಂಬುದು ಟ್ರೇಲರ್ ನಲ್ಲೆ ತಿಳಿಯುತ್ತಿದೆ. ಚಿತ್ರ ಯಶಸ್ವಿಯಾಗಲಿ" ಎಂದು ಅಜಯ್ ರಾವ್ ಹಾರೈಸಿದರು.


     "ಇಡೀ ತಂಡದ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರ ನಿಮಗೆ ಬೇಸರ ತರಿಸದೆ, ನಿಮ್ಮನ್ನು ಎರಡು ಗಂಟೆಗಳ ಕಾಲ ಹಿಡಿದಿಟ್ಟುಕೊಳ್ಳುತ್ತದೆ. ಅಂತಹ ಉತ್ತಮ ಕಥಾಹಂದರ ಹೊಂದಿದೆ 'ಮಾಂಕ್ ದಿ ಯಂಗ್" ಎಂದರು ನಟ ಸರೋವರ್.


     "ನಾವು ನಾಲ್ಕು ಜನ ನಿರ್ಮಾಪಕರು ಒಂದೊಂದು ರಾಜ್ಯದವರು. ಹಾಗಾಗಿ ಇದು ನಿಜವಾಗಲೂ ಪ್ಯಾನ್ ಇಂಡಿಯಾ ಚಿತ್ರ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಫೆಬ್ರವರಿ 28 ರಂದು ನಮ್ಮ ಚಿತ್ರ ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಬಿಡುಗಡೆಯಾಗುತ್ತಿದೆ" ಎಂದರು ನಿರ್ಮಾಪಕರಾದ ಕರ್ನಲ್ ರಾಜೇಂದ್ರನ್, ಗೋಪಿಚಂದ್, ಲಾಲ್ ಚಂದ್ ಖತಾರ್ ಹಾಗೂ ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳ.


     "ಪ್ರಪಂಚದಲ್ಲಿ ಜನ ಪಾಸಿಟಿವ್ ಗಿಂತ ನೆಗೆಟಿವ್ ಅನ್ನು ಹೆಚ್ಚು ಬೇಗ ನಂಬುತ್ತಾರೆ. ಆದರೆ ಪಾಸಿಟಿವ್ ಏನು ಎಂಬುದು ನಿಧಾನಕ್ಕೆ ಎಲ್ಲರಿಗೂ ತಿಳಿಯುತ್ತದೆ. ಈ ಅಂಶವನ್ನಿಟ್ಟುಕೊಂಡು ಕಥೆ ಹೆಣೆಯಲಾಗಿದೆ. ಸಿಜೆ ವರ್ಕ್ ಗೆ ಹೆಚ್ಚು ಒತ್ತು ನೀಡಲಾಗಿದೆ "ಎಂದು  ನಿರ್ದೇಶಕ ಮಾಸ್ಚಿತ್ ಸೂರ್ಯ ತಿಳಿಸಿದರು.


     ನಾಯಕಿ ಸೌಂದರ್ಯ ಗೌಡ, ಛಾಯಾಗ್ರಾಹಕ ಕಾರ್ತಿಕ್ ಶರ್ಮ, ಸಂಗೀತ ನಿರ್ದೇಶಕ ಸ್ವಾಮಿನಾಥನ್, ‌ನಟ ಬಬ್ಲು ಪೃಥ್ವಿರಾಜ್‌, ಉಷಾ ಭಂಡಾರಿ, ನಟ ಪ್ರಣಯ್ ಮೂರ್ತಿ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು 'ಮಾಂಕ್ ದಿ ಯಂಗ್' ಬಗ್ಗೆ ಮಾತನಾಡಿದರು.

















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್