LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ: ಒಂದೇ ದಿನ 8 ಸಾವು

ಬೆಂಗಳೂರು, ಮೇ 28: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ  ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಮಳೆ ಸಂಬಂಧಿತ ಅವಘಡಗಳು ಹಲವರನ್ನು ಬಲಿ ಪಡೆದಿವೆ. ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 8 ಮಂದಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದ ಗಣೇಶ್ ಕಾಂಬಳೆ ಎಂಬ 9 ವರ್ಷದ ಬಾಲಕ ಹಾಗೂ ದೀಪಕ್ ಕಾಂಬಳೆ ಎಂಬ 11 ವರ್ಷದ ಬಾಲಕ ಎತ್ತಿನಗಾಡಿಯಲ್ಲಿ ತೆರಳುತ್ತಿದ್ದರು. ನಿರಂತರ ಮಳೆಯಿಂದಾಗಿ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳದಲ್ಲಿ ದಾರಿ ಕಾಣದೇ ಎತ್ತಿನ ಬಂಡಿ ಮಗುಚಿಬಿದ್ದಿದೆ. ಪರಿಣಾಮವಾಗಿ ಮಕ್ಕಳಿಬ್ಬರು ಮೃತಪಟ್ಟಿದ್ದು, ಒಂದು ಎತ್ತು ಕೂಡ ಸಾವನ್ನಪ್ಪಿದೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ಶಾಂತಮ್ಮ ತಳವಾರ ಎಂಬವರು ಮೃತಪಟ್ಟಿದ್ದಾರೆ . ಕಂದಾಯ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಬ್ಯಾಡಗಿ ತಾಲೂಕಿನ ಶಿಡೇನೂರು ಬಳಿ ಗಾಳಿಯಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ವಿದ್ಯುತ್‌ ಸ್ಪರ್ಶದಿಂದ ಜಮೀನಿನಲ್ಲಿದ್ದ ರೈತ ಬಾಬುಲಾಲ್ ಬ್ಯಾಡಗಿ ಅಸುನೀಗಿದ್ದಾರೆ. ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಶಶಾಂಕಗೌಡ ಮುದ್ದಿನಗೌಡ ಎಂಬ ಬಾಲಕ ಇಹಲೋಕ ತ್ಯಜಿಸಿದ್ದಾನೆ. ಪಂಪ್‌ಸೆಟ್‌ ಮೋಟರ್ ಆನ್‌ ಮಾಡಲು ಹೋದಾಗ ದುರಂತ ಸಂಭವಿಸಿದೆ.

ಇತ್ತ ದೊಡ್ಡಬಳ್ಳಾಪುರ ತಾಲೂಕಿನ ಕಂಗಳಾಪುರದಲ್ಲಿ ಟ್ರಾನ್ಸ್​ಫಾರ್ಮರ್ ರಿಪೇರಿ ಮಾಡುವಾಗ ಕರೆಂಟ್ ಶಾಕ್​ ಹೊಡೆದು ರಂಗಪ್ಪ ಎಂಬವರು ಸಾವಿಗೀಡಾಗಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದಲ್ಲಿ ಮನೆ ಬಳಿ ಕೆಲಸ ಮಾಡುತ್ತಿದ್ದಾಗ ಮರದ ಕೊಂಬೆ ಬಿದ್ದು ವಿಷ್ಣು ಬೆಳ್ಯಪ್ಪ ಎಂಬವರು ಮೃತಪಟ್ಟಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್