Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 30 ವಿದ್ಯಾರ್ಥಿಗಳಿಗೆ  ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಅಗ್ರಶ್ರೇಣಿ


ವಿಜಯನಗರ: 2024-25 ನೇ ಸಾಲಿನ ಕರ್ನಾಟಕ ಸರ್ಕಾರ ಶಿಕ್ಷಣ ಇಲಾಖೆ ನಡೆಸುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 30 ವಿದ್ಯಾರ್ಥಿಗಳು ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ( ಕಾಳಘಟ್ಟ ) ಚಿತ್ರಕಲಾ ಶಿಕ್ಷಕಿ ರಂಜಾಬೀ ಅವರು ಪ್ರಕಟಣೆ ಮೂಲಕ ತಿಳಿಸಿದರು.


ವಿಜಯ ನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಾಳಘಟ್ಟ (ಬಿಸಿ 520) ಯಲ್ಲಿ ಪೋಷಕರ ಸಭೆ ಮತ್ತು ಚಿತ್ರಕಲಾ ಪ್ರದರ್ಶನ ಮಕ್ಕಳ ಪೋಷಕರಿಂದ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ  ಉದ್ಘಾಟಿಸಿದರು.


 ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾಷ ಸಂಗಜ್ಜ ಬಾರಿಕಿ ಮಾತನಾಡಿದ ಅವರು ಮಕ್ಕಳಲ್ಲಿ ಕಲಾ ಆಸಕ್ತಿಗಳು ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳಲ್ಲಿ ಕಲೆ ಅಡಗಿರುತ್ತದೆ ಹುಡುಕಿ ಮುಖ್ಯ ವೇದಿಕೆಗೆ ತರುವ ಕೆಲಸವನ್ನು ಚಿತ್ರಕಲಾ ಶಿಕ್ಷಕಿ ರಂಜಾನ್ ಬಿ ಅವರು ಮಾಡುತ್ತಿದ್ದಾರೆ. ವಸತಿ ಶಾಲೆ ಹಿಂದಿನ ವರ್ಷ ನೂರಕ್ಕೆ ನೂರು ಫಲಿತಾಂಶ ಹೊಂದಿದೆ, ಕ್ರೀಡೆಯಲ್ಲಿ ಕಬ್ಬಡ್ಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ, ಯೋಗದಲ್ಲಿ  ವಿಭಾಗ ಮಟ್ಟಕ್ಕೆ ಆಯ್ಕೆ ಆಗಿರುವುದು ಈ ವಸತಿ ಶಾಲೆಯ ಸಾಧನೆ ಎಂದರು.


ವಿದ್ಯಾರ್ಥಿಗಳು  ಅಂಬೇಡ್ಕರ್ ಮಹಾತ್ಮ ಗಾಂಧೀಜಿ, ಮದರ್ ತೆರೇಸಾ, ದ.ರಾ ಬೇಂದ್ರೆ, ಕುವೆಂಪು ಅವರ ಭಾವಚಿತ್ರಗಳು, ವಿಜ್ಞಾನ ಚಿತ್ರಗಳು, ಕಂಪ್ಯೂಟರ್  ನ ವಿವಿಧ ಭಾಗಗಳ , ಗಣಿತದ ಆಕಾರಗಳು, ಸ್ವಚ್ಛತೆಯ ಸೂಚನಾ ಫಲಕಗಳು, ಪ್ರದರ್ಶನದಲ್ಲಿ ಗಮನಸೆಳೆದವು.


ವಸತಿ ಶಾಲೆ ಮಕ್ಕಳು ಚಿತ್ರಕಲೆ ಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ತಿಂಗಳ ಚಿತ್ರಕಲಾ ಪ್ರದರ್ಶನವನ್ನು ನಡೆಸುವುದು ವಿಶೇಷವಾಗಿದೆ.


 ಪೋಷಕರು ಮಕ್ಕಳಲ್ಲಿರುವ ಕಲೆಯನ್ನು ಗಮನಿಸಿ ಕಲೆ ಕಂಡು ಸಂತೋಷ ವ್ಯಕ್ತಪಡಿಸಿರುತ್ತಾರೆ.


ಈ ಸಮಯದಲ್ಲಿ ನಿಲಯ ಪಾಲಕರು ರವಿ,ಕೆ. ಶೀಲಾ ದೇವಿಕ ಜೋಗಿ, ಮಂಜುನಾಥ್ ಮಾಳಗಿ ಹನುಮಂತಪ್ಪ  ಶಿವರಾಜ್ ಮಿಮಿಕ್ರಿ ಆರ್ಟಿಸ್ಟ್ , ಹೆಚ್. ಜಯರಾಮ್  ನಲ್ಲಸ್ವಾಮಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ