Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದರು.


ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಭೇರಿ ಬಾರಿಸಿದ್ದ ಬೊಮ್ಮಾಯಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ವಿಜಯಿಯಾಗಿದ್ದಾರೆ. ಎದುರಾಳಿಯಾಗಿ ಕಾಂಗ್ರೆಸ್ ಪಕ್ಷದಿಂದ ಕಣದಲ್ಲಿದ್ದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಅವರು ಗೆಲುವು ಸಾಧಿಸಿದ್ದಾರೆ.


7,05,538 ಮತಗಳನ್ನು ಪಡೆದಿದ್ದ ಬಸವರಾಜ ಬೊಮ್ಮಾಯಿ ಅವರು, 43,513 ವೋಟ್​ ಅಂತರದಿಂದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಜಯಿಸಿದ್ದರು. ಗಡ್ಡದೇವರಮಠ ಅವರು 6,62,025 ಮತ ಪಡೆದು ತೀವ್ರ ಪೈಪೋಟಿ ನೀಡಿದ್ದರು.

Advertisement

ಬೊಮ್ಮಾಯಿ ಗೆಲುವಿನೊಂದಿಗೆ ಹಾವೇರಿ - ಗದಗ ಕ್ಷೇತ್ರದಲ್ಲಿ ಬಿಜೆಪಿ ಪಾರಮ್ಯ ಮುಂದುವರೆದಿದೆ. 2008ರಲ್ಲಿ ಕ್ಷೇತ್ರ ಮರುವಿಂಗಡಣೆಯ ಬಳಿಕ ಶಿವಕುಮಾರ್ ಚನ್ನಬಸಪ್ಪ ಉದಾಸಿ ಸತತವಾಗಿ ಗೆದ್ದಿದ್ದರು. ಆಗಿನಿಂದಲೂ ಬಿಜೆಪಿಯ ಭದ್ರಕೋಟೆಯಾಗಿದ್ದು, 2014 ಹಾಗೂ 2019ರ ಚುನಾವಣೆಗಳಲ್ಲಿ ಉದಾಸಿಯವರೇ ಗೆಲುವು ಕಂಡಿದ್ದರು. ಈ ಬಾರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆದ್ದು ಮೊದಲ ಬಾರಿಗೆ ಸಂಸತ್​ಗೆ ಪ್ರವೇಶಿಸುತ್ತಿದ್ದಾರೆ.


ಬೊಮ್ಮಾಯಿ ರಾಜೀನಾಮೆ ಸಲ್ಲಿಕೆ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕರಾದ ಜಿ.ಟಿ. ದೇವೇಗೌಡ, ಮುನಿರಾಜು, ಡಾ. ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮಾರುತಿ ಮುಳೆ ಹಾಗೂ ಭೋಜೇಗೌಡ ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*