ಬೆಳಗಾವಿ: ದೇಸೂರು ಗ್ರಾಮದ ಶ್ರೀ ಬ್ರಹ್ಮಲಿಂಗ ದೇವಸ್ಥಾನ ಹಾಗೂ ರಾಜಹಂಸಗಡ್ ಕೋಟೆಯ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜೆಯಲ್ಲಿ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಪಾಲ್ಗೊಂಡು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ನಂತರ ಎರಡೂ ದೇವಸ್ಥಾನಗಳಲ್ಲಿ ಆಯೋಜಿಸಲಾಗಿದ್ದ ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಭಕ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.