Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೃಣಾಲ್‌ ಹೆಬ್ಬಾಳಕರ್ ಗೆಲುವು ಶತಸಿದ್ಧ: ಶಾಸಕ ಪ್ರದೀಪ್ ಈಶ್ವರ್


ಬೆಳಗಾವಿ02: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮಾರ್ಗದರ್ಶನದಲ್ಲಿ ರಾಜಕೀಯ ಜೀವನ ಆರಂಭಿಸಿರುವ ಮೃಣಾಲ್‌ ಹೆಬ್ಬಾಳಕರ್ ಜಿಲ್ಲೆಯ ಭವಿಷ್ಯದ ನಾಯಕನಾಗಿದ್ದು, ಇಂತಹ ಯುವಕನಿಗೊಂದು ಅವಕಾಶ ಕೊಡಿ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜೊತೆಗೂಡಿ  ಕೆಎಲ್ಇ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು, ಆಯುರ್ವೇದ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಮತಯಾಚಿಸಿದ ಅವರು, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.


ಮೃಣಾಲ್‌ ಹೆಬ್ಬಾಳಕರ್ ಅವರಿಗೆ ಇನ್ನು 40-50 ವರ್ಷ ರಾಜಕೀಯ ಮಾಡುವ ಹಂಬಲವಿದೆ. ಗೆದ್ದಮೇಲೆ ಎಲ್ಲರಿಗೂ ಸ್ಪಂದಿಸುವ ವ್ಯಕ್ತಿ.‌ ತಾಯಿಯಂತೆ ಅಭಿವೃದ್ಧಿ ಬಗ್ಗೆ ಕನಸು ಕಟ್ಟಿಕೊಂಡಿದ್ದಾನೆ. ಇಡೀ ದೇಶದ ಅತಿ ದೊಡ್ಡ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಈ ಯೋಜನೆ ಜಾರಿಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೊಡುಗೆ ಅಪಾರ ಎಂದರು.‌


ದೇಶ‌ ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಆಹಾರ‌ ಭದ್ರತಾ ಕಾಯ್ದೆ ತಂದಿದ್ದು ನಾವು, ಸರ್ಕಾರದ ಸ್ವಾಮ್ಯದ ಕಂಪನಿಗಳು, ರೈಲ್ವೆ, ಐಐಟಿ ಸೇರಿದಂತೆ ಹಲವು ಕಾಲೇಜು, ವಿಶ್ವವಿದ್ಯಾಲಯಗಳನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷ ಎಂದು‌ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.


ಬೆಳಗಾವಿ ಕೇವಲ ಮಾತಿಗಷ್ಟೇ ಎರಡನೇ ರಾಜಧಾನಿ ಆಗಬಾರದು. ಅಭಿವೃದ್ಧಿಯಲ್ಲೂ ಜಿಲ್ಲೆ ಬೆಳೆಯಬೇಕು. ಮಹಿಳಾ ಮೀಸಲಾತಿ ಜಾರಿಗೆ ಬಂದರೆ ನಮ್ಮ ಲಕ್ಷ್ಮೀ ಮೇಡಂ ಅವರಿಗೆ  ಮುಖ್ಯಮಂತ್ರಿ ಆಗುವ ಯೋಗವು ಬರಲಿದೆ ಎಂದು ಹೇಳಿದರು.


ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೋ.ರಾಜೀವ್ ಗೌಡ, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್, ಕೆಎಲ್ ಇ ವಿವಿಯ ಆಜೀವ ಸದಸ್ಯರಾದ ಡಾ.ವಿ.ಎಸ್. ಸಾಧುನವರ್ ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ