Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

’ಕ್ಷಮೆಯಿರಲಿ ತಂದೆ’ ಜೂನ್ ೧೨ ಕ್ಕೆ ಬಿಡುಗಡೆ 

ಬೆಂಗಳೂರು : ಶ್ರೀದೇವಿರಮ್ಮ ಮಲ್ಲಿಕಾರ್ಜುನ ಸ್ವಾಮಿ ಫಿಲಂಸ್ ಅವರ ಶ್ರೀಮತಿ ಅಹಲ್ಯಾ ಸುರೇಶ ಅರ್ಪಿಸುವ ಸ.ಹರೀಶ್‌ರ ಕಥೆ ’ಡೆತ್ ಸರ್ಟಿಫಿಕೆಟ್ ಆಧಾರಿತ ’ಕ್ಷಮೆಯಿರಲಿ ತಂದೆ’ ಇದೆ ಜೂನ್ ೧೨ ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ.   
   ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಹಾಸ್ಯ ಕಲಾವಿದರಾಗಿ ಮೂರು ದಶಕಗಳಿಂದ ೪೦೦ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ಎಂ.ಎನ್.ಸುರೇಶ್ (ಮೂಗು ಸುರೇಶ್) ಈಗ ನಿರ್ಮಾಪಕ, ನಿರ್ದೇಶಕರಾಗಿ   ’ಕ್ಷಮೆಯಿರಲಿ ತಂದೆ’ ಚಿತ್ರ ನಿರ್ಮಿಸಿದ್ದು, ಈ ಚಿತ್ರದ ಮೋಷನ್ ಪೋಸ್ಟರ್, ಟ್ರೇಲರ್ ಹಾಗೂ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ಬೆಂಗಳೂರಲ್ಲಿ ಜರುಗಿತು. ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಾದ ಟಿ.ಎಸ್ ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ನಿರ್ಮಾಪಕ ಉಮೇಶ್ ಬಣಕಾರ್ ಹಾಗೂ ರಾಮಕೃಷ್ಣ (ಮೇಕಪ್)ಮುಖ್ಯ ಅತಿಥಿಗಳಾಗಿ ಆಗಮಿಸಿ ಬಿಡುಗಡೆ ಮಾಡಿ, ಚಿತ್ರದ ಟ್ರೇಲರ್ ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ, ಎಂ ಎನ್ ಸುರೇಶ್ ನಿರ್ಮಾಪಕ ಹಾಗೂ ನಿರ್ದೇಶಕರಾಗಿಯೂ ಗೆಲ್ಲಲಿ ಎಂದು ಶುಭ ಹಾರೈಸಿದರು. ಚಿತ್ರದ ಕುರಿತು ನಿರ್ಮಾಪಕ ಹಾಗೂ ನಿರ್ದೇಶಕ ಎನ್, ಎಂ.ಸುರೇಶ್ ಮಾತನಾಡಿ ನಾನು ಕೆಲವು ಚಿತ್ರಗಳಿಗೂ ಸಹ ನಿರ್ಮಾಪಕನಾಗಿದ್ದೆ. ಪೂರ್ಣಪ್ರಮಾಣದ ನಿರ್ಮಾಪಕನಾಗಿರುವುದು ಈ ಚಿತ್ರದಿಂದ. ನಿರ್ದೇಶನ ನಾನು ಮಾಡಬೇಕೆಂದುಕೊಂಡಿರಲಿಲ್ಲ, ನನ್ನ ಕಾರ್ಯವೈಖರಿ ಹತ್ತಿರದಿಂದ ಬಲ್ಲ ಸ್ನೇಹಿತರು ನೀವೇ ನಿರ್ದೇಶನ ಮಾಡಿ ಎಂದರು. ಮೊದಲ ನಿರ್ದೇಶನದ ಚಿತ್ರ, ಬೇರೆಯವರು ದುಡ್ಡು ಹಾಕುವುದು ಬೇಡ ಅಂತ ನಾನು ಕೂಡಿಟ್ಟಿದ್ದ ಹಣವನ್ನೇ ಈ ಚಿತ್ರಕ್ಕೆ ಹಾಕಿ ನಿರ್ಮಾಣ ಮಾಡಿದ್ದೇನೆ. ಬೆಂಗಳೂರು, ತುಮಕೂರು ಮೊದಲಾದ ಕಡೆ ಹತ್ತು ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ.  ಶೀರ್ಷಿಕೆ ತಿಳಿಸುವಂತೆ ಇದೊಂದು ತಂದ-ಮಗನ ಬಾಂಧವ್ಯ ಸಾರುವ ಚಿತ್ರ. ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.
   ತಾರಾಗಣದಲ್ಲಿ  ಮೂಗು ಸುರೇಶ್ ಜೊತೆಗೆ ಮಂಜುನಾಥ ಹೆಗ್ಡೆ, ರೇಣುಕಾ ಬಾಲಿ, ಶ್ರೀಮಂತ, ವಿನ್ಯಾ ಶೆಟ್ಟಿ ಮೊದಲಾದವರಿದ್ದಾರೆ.  ತಾಂತ್ರಿಕವರ್ಗದಲ್ಲಿ ಛಾಯಾಗ್ರಹಣ ಸೂರ್ಯಕಾಂತ, ಸಂಕಲನ ಮುತ್ತುರಾಜ್, ಸಂಗೀತ ಪುಣ್ಯಶ್ ಕುಮಾರ್, ಪಿಆರ್ ಓ ಸುಧೀಂದ್ರಕುಮಾರ್, ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿಯವರಿದ್ದಾರೆ. ಚಿತ್ರವನ್ನು ಶ್ರೀ ದೇವಿರಮ್ಮ ಮಲ್ಲಿಕಾರ್ಜುನಸ್ವಾಮಿ ಫಿಲಂಸ್, ರಾಘವೇಂದ್ರ ಫಿಲಂಸ್,ಕವಿ ಎಂಟರ್ಪ್ರೈಸಸ್ ಹಂಚಿಕೆದಾರರಾಗಿದ್ದಾರೆ.
**

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ