LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಲರಾಮನ ದಿನಗಳು ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ

     ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು  ನಿರ್ಮಿಸುತ್ತಿರುವ ಹಾಗೂ ಆ ದಿನಗಳು ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್

ನಾಯಕರಾಗಿ ನಟಿಸುತ್ತಿರುವ 'ಬಲರಾಮನ ದಿನಗಳು' ಚಿತ್ರಕ್ಕೆ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ ಅಭಿನಯಿಸುತ್ತಿದ್ದಾರೆ.


     ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಅತುಲ್ ಕುಲಕರ್ಣಿ, ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿದ್ದಾರೆ.

ಪ್ರಸ್ತುತ ಅತುಲ್ ಕುಲಕರ್ಣಿ ಅವರು 'ಬಲರಾಮನ ದಿನಗಳು' ಚಿತ್ರದಲ್ಲೂ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅತುಲ್ ಕುಲಕರ್ಣಿ ಅವರಿಗೆ ಸ್ವಾಗತ ಕೋರಿದೆ.


     'ಬಲರಾಮನ ದಿನಗಳು' ಚಿತ್ರದ ನಾಯಕಿಯಾಗಿ ಪ್ರಿಯಾ ಆನಂದ್  ಅಭಿನಯಿಸುತ್ತಿದ್ದಾರೆ. 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ನೀಡುತ್ತರುವ 50 ನೇ ಚಿತ್ರ ಹಾಗೂ ಕನ್ನಡದಲ್ಲಿ ಮೊದಲ ಚಿತ್ರವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ